ಕಿನ್ನಿಮುಲ್ಕಿ–ಅಂಬಲಪಾಡಿ ಸರ್ವಿಸ್ ರಸ್ತೆಯನ್ನು ತಕ್ಷಣ ತೆರವುಗೊಳಿಸಲು ಒತ್ತಾಯ

0
17

ಉಡುಪಿಯ ಕಿನ್ನಿಮುಲ್ಕಿಯಿಂದ ಅಂಬಲಪಾಡಿವರೆಗೆ ಇರುವ ಸರ್ವಿಸ್ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದ್ವಿಚಕ್ರ ವಾಹನಗಳನ್ನು ಅಕ್ರಮವಾಗಿ ಹಾಗೂ ಅಸಮರ್ಪಕವಾಗಿ ನಿಲುಗಡೆ ಮಾಡುತ್ತಿರುವುದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ.

ಈ ಪ್ರದೇಶವು ಸದಾ ಭಾರೀ ವಾಹನ ಸಂಚಾರದಿಂದ ಕೂಡಿದ್ದು, ಸರ್ವಿಸ್ ರಸ್ತೆಯ ಬದಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸುವುದರಿಂದ ದೊಡ್ಡ ವಾಹನಗಳು ಸಂಚರಿಸಲು ಸಾಧ್ಯವಾಗದೆ ಪದೇಪದೇ ಸಿಲುಕಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಪ್ರತಿದಿನ ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದ್ದು, ಆಗಾಗ್ಗೆ ಉಂಟಾಗುವ ಸಂಚಾರ ದಟ್ಟಣೆಯಿಂದ ಸಾರ್ವಜನಿಕರು ಸಾಕಷ್ಟು ಅನಾನುಕೂಲ ಅನುಭವಿಸುತ್ತಿದ್ದಾರೆ.

ಇದಲ್ಲದೆ, ಪ್ರತಿದಿನ ನಡೆಯುವ ಮೀನು ಮಾರುಕಟ್ಟೆಯ ಪ್ರವೇಶ ದ್ವಾರವೂ ದ್ವಿಚಕ್ರ ವಾಹನಗಳ ಅಸಮರ್ಪಕ ನಿಲುಗಡೆಯಿಂದ ಸಂಪೂರ್ಣವಾಗಿ ಮುಚ್ಚಿಹೋಗುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದಿದೆ. ಇದು ವಾಹನ ಸಂಚಾರ ಹಾಗೂ ಸಾರ್ವಜನಿಕರ ಓಡಾಟಕ್ಕೆ ಮತ್ತಷ್ಟು ತೊಂದರೆಯನ್ನು ಉಂಟುಮಾಡುತ್ತಿದೆ.