ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನಿಂದ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿದ್ದು, ಚಾಲಕ ಗಂಭೀರ ಗಾಯಗೊಂಡಿದ್ದಾರೆ.
ಈ ದುರ್ಘಟನೆ ಚಾರ್ಮಾಡಿ ಘಾಟಿಯ ಮಲೆಯ ಮಾರುತ ಬಳಿ ನಡೆದಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ವಾಹನ ಇದಾಗಿದೆ. ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಘಾಟಿಯಲ್ಲಿ ಕಾಣದ ಮಟ್ಟಿಗೆ ಮಂಜು ಆವರಿಸಿಕೊಂಡಿದ್ದ ಹಿನ್ನೆಲೆಯಲ್ಲಿ ರಸ್ತೆ ಸ್ಪಷ್ಟವಾಗಿ ಕಾಣದೆ ಈ ಅನಾಹುತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.