ರಾಜ್ಯ ವಿಧಾನ ಸಭೆಯ ವಿರೋಧ ಪಕ್ಷದ ಉಪ ನಾಯಕ ಹಾಗೂ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ್ ಅವರು ಪ್ರಥಮ ಬಾರಿಗೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಬೇಟಿ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ಅರವಿಂದ ಬೆಲ್ಲದ್ ಅವರನ್ನು ಶಾಲು ಹೊದೆಸಿ, ಪೇಟ ತೊಡಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಪ್ರಮುಖರಾದ ಸತ್ಯಾನಂದ ನಾಯಕ್, ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಶ್ರೀಕಾಂತ್ ನಾಯಕ್, ಶಿವಕುಮಾರ್ ಅಂಬಲಪಾಡಿ, ಸಂಧ್ಯಾ ರಮೇಶ್, ದಿನೇಶ್ ಅಮೀನ್, ಶಶಾಂಕ್ ಶಿವತ್ತಾಯ, ಸಲೀಂ ಅಂಬಾಗಿಲು, ಚಂದ್ರ ಪಂಚವಟಿ, ಕುಮಾರ್ ದಾಸ್, ರುಡಾಲ್ಫ್ ಡಿಸೋಜ, ದಿಲ್ಲೇಶ್ ಶೆಟ್ಟಿ, ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಲೋಕಯ್ಯ ಪಣಿಯಾಡಿ, ಪ್ರಭಾ ರಾವ್, ಚಂದ್ರಶೇಖರ ಪ್ರಭು, ಕಿಶೋರ್ ಕುಮಾರ್ ಕರಂಬಳ್ಳಿ, ಶಿವರಾಮ್ ಕಾಡಿಮಾರ್, ಸಂತೋಷ್ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.