ಮಂಗಳೂರು : ಬಿಲ್ಲವ ಸಮುದಾಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಿಂದನಾತ್ಮಕವಾಗಿ ಹೇಳಿಕೆಗಳನ್ನು ನೀಡಿರುವ ಅನಿತಾ ಕಾಸರಗೋಡು ಎಂಬ ಮಹಿಳೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮನವಿ ಸಲ್ಲಿಸಲಾಯಿತು.
ಬ್ರಹ್ಮಶ್ರೀನಾರಾಯಣಗುರು ಧರ್ಮ ಪರಿಪಾಲನ ಸಂಘ(ರಿ) ಬೆಂಗಳೂರು ಇದರ ಉಡುಪಿ ಘಟಕದ ಜಿಲ್ಲಾಧ್ಯಕ್ಷರಾದ ಶ್ರೀಧರ್ ಅಮೀನ್ ಮಣಿಪುರ,ಪದಾಧಿಕಾರಿಗಳು, ಮತ್ತು ಸದಸ್ಯರು ಸೇರಿ ಕಾಪು ಪೊಲೀಸ್ ಠಾಣೆಯಲ್ಲಿ ಮನವಿ ನೀಡಿದರು.
ಸಾಮಾಜಿಕ ಜಾಲತಾಣದಲ್ಲಿ ಇಂತಹ ಹೇಳಿಕೆಗಳನ್ನು ನೀಡಿ ಸಮಾಜದ ಸೌಹಾರ್ದತೆಯನ್ನು ಕೆಡಿಸುವ ಉದ್ದೇಶವನ್ನು ಹೊಂದಿರುವ ಇಂಥವರ ವಿರುದ್ಧ ಆದಷ್ಟು ಬೇಗ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಯಿತು.

