ವೈಬ್ರೆಂಟ್ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

0
22

ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಸಮಯ ಪ್ರಜ್ಞೆ ಇದ್ದರೆ ಜೀವನದಲ್ಲಿ ಯಶಸ್ಸುಗಳಿಸಲು ಸಾಧ್ಯ- ಡಾ. ಎಸ್.ಎನ್.ವಿ.

ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ ವತಿಯಿಂದ ನಗರದ ಕನ್ನಡ ಭವನದಲ್ಲಿ ಪ್ರಥಮ ಪಿಯುಸಿಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಮತ್ತು ಕಾಲೇಜಿನ ವಿವಿಧ ಶೈಕ್ಷಣಿಕ ಸಂಘಗಳ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಾಲೇಜಿನ ಟ್ರಸ್ಟಿ ಹಾಗೂ ಪ್ರಾಂಶುಪಾಲರಾದ ಎಸ್. ಎನ್. ವೆಂಕಟೇಶ್ ನಾಯಕ್ ರವರು ಗುರಿಯನ್ನು ಸಾಧಿಸಲು ಶಿಸ್ತು, ಸಂಯಮ ಮತ್ತು ಸಮಯಪ್ರಜ್ಞೆಯನ್ನು ರೂಢಿಸಿಕೊಂಡು ಕಲಿಕೆಗೆ ಹೆಚ್ಚಿನ ಒತ್ತುಕೊಟ್ಟು ನಿರಂತರ ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದರೆ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದರು.

ಕಲಿಕೆಗೆ ಪೂರಕವಾದ ಎಲ್ಲ ವ್ಯವಸ್ಥೆ ಇದೆ. ಇಲ್ಲಿರುವ ಸೌಲಭ್ಯಗಳನ್ನು ಪರಿಪೂರ್ಣವಾಗಿ ಬಳಸಿಕೊಂಡು ಉತ್ತಮ ಸಾಧನೆ ಮಾಡಲು ಶ್ರಮಪಡಬೇಕು ಎಂದರು.
ಟ್ರಸ್ಟಿ ಚಂದ್ರಶೇಖರ ರಾಜೇ ಅರಸ್, ಟ್ರಸ್ಟಿ ಡಾ. ಶರತ್ ಗೋರೆಯವರು ಸ್ಪರ್ಧಾತ್ಮಕ ಪರೀಕ್ಷೆಗಳಾದ ನೀಟ್, ಜೆಇಇ, ಸಿಇಟಿ, ನಾಟಾ, ಎನ್ ಡಿ ಎ ಪರೀಕ್ಷೆಗಳು ನಡೆಯುವ ರೀತಿ ಮತ್ತು ಅದಕ್ಕೆ ವಿದ್ಯಾರ್ಥಿಗಳು ಹೇಗೆ ತಯಾರಿ ಮಾಡಿಕೊಳ್ಳಬೇಕು ಎಂಬುದನ್ನು ಸವಿಸ್ತಾರವಾಗಿ ವಿವರಿಸಿದರು.

ಟ್ರಸ್ಟಿ ಯೋಗೇಶ್ ಬೆಡೆಕರ್, ಸುಭಾಷ್ ಝಾ, ಮೆಹಬೂಬ್ ಬಾಷಾ ರವರು ದೈಹಿಕ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡರೆ ಮಾತ್ರ ತರಗತಿಗಳಲ್ಲಿ ಮಾಡುವ ಪಾಠಗಳನ್ನು ಸರಿಯಾಗಿ ಅರ್ಥೈಸಿಕೊಳ್ಳಲು ಸಾಧ್ಯವಿದೆ ಎಂದರು.

ಟ್ರಸ್ಟಿ ಸುಭಾಷ್ ಝಾ ಮಾತನಾಡಿ, ತಮ್ಮ ಉತ್ತಮ ಭವಿಷ್ಯಕ್ಕಾಗಿ ಎರಡು ವರ್ಷ ಕಠಿಣ ಶ್ರಮಪಡಬೇಕು. ಸಮಾಜದ ಉತ್ತಮ ಪ್ರಜೆಯಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಎಲ್ಲ ಪ್ರಥಮ ಪಿಯುಸಿ ವಿದ್ಯಾರ್ಥಿಗಳು, ಕಾಲೇಜಿನ ಉಪನ್ಯಾಸಕರು ಮತ್ತು ಬೋಧಕೇತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥ ಹರೀಶ್ ನಂಬಿಯಾರ್ ನಿರೂಪಿಸಿದರೆ, ಉಪನ್ಯಾಸಕಿ ವರ್ಷ ಕಾಮತ್ ಸ್ವಾಗತಿಸಿದರು. ಉಪನ್ಯಾಸಕ ಸತೀಶ್ ಬಂಗೇರ ವಂದನಾರ್ಪಣೆಗೈದರು.

ವರದಿ ರಾಯಿ ರಾಜ ಕುಮಾರ

LEAVE A REPLY

Please enter your comment!
Please enter your name here