ಸವಣೂರು : ಶಿಕ್ಷಕರು ಮತ್ತು ಪೋಷಕರು ಶಿಕ್ಷಣ ಕ್ಷೇತ್ರದ ಎರಡು ಆಧಾರಸ್ತಂಭಗಳಿದ್ದಂತೆ ಅದರ ಮಹತ್ವ ಅರಿತು ಎಲ್ಲರೂ ಸಾಗಬೇಕಾಗಿದೆ.ಪದವಿ ಇದ್ದರೂ ಕೌಶಲ್ಯದ ಕೂರತೆಯಿಂದ ವಿದ್ಯಾರ್ಥಿಗಳು ಉದ್ಯೋಗ ಕ್ಷೇತ್ರದಲ್ಲಿ ನಿರಾಶೆಯನ್ನು ಅನುಭವಿಸುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದರು.
ಸಮಾಜದಲ್ಲಿ ಸ್ಥಿರ ಬದಲಾವಣೆ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ಸವಣೂರು ಇಲ್ಲಿ ನಡೆದ ಶಿಕ್ಷಕ-ರಕ್ಷಕರ ಸಂಘದ ಸಮಾಲೋಚನಾ ಸಭೆಯನ್ನು ಉದ್ದೇಶಿಸಿ ಕಾರ್ಯಕ್ರಮ ಕ್ಕೆ ಆಗಮಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳಾದ ಅಡ್ವಕೇಟ್ ಅಶ್ವಿಲ್ ಎಲ್ ಶೆಟ್ಟಿ ಮಾತನಾಡುತ್ತಾ ಹೇಳಿದರು. ಇಂದು ಗುಣಮಟ್ಟದ ಶಿಕ್ಷಕರ ಕೊರತೆ ಇದ್ದು ಆ ನಿಟ್ಟಿನಲ್ಲಿಯೂ ಕೂಡ ಸುಧಾರಿಸಬೇಕಾಗಿದೆ. ಎಲ್ಲ ಪೋಷಕ ರಲ್ಲಿ ತಮ್ಮ ತಮ್ಮ ಮಕ್ಕಳನ್ನು ವಿದ್ಯಾರಶ್ಮಿಗೆ ಸೇರಿಸುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ.ರಾಜಲಕ್ಷ್ಮೀ ಎಸ್ ರೈ ಮಾತನಾಡಿ ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿ ಕಮ್ಮಿಯಾಗದಂತೆ ನೋಡಿಕೊಳ್ಳುವಂತೆ ಮನವಿಮಾಡಿದ್ದಲ್ಲದೇ ವಿಶ್ವವಿದ್ಯಾಲಯದ ಪರೀಕ್ಷಾ ಶುಲ್ಕವನ್ನು ಕ್ಲಪ್ತ ಸಮಯದಲ್ಲಿ ಪಾವತಿಸುವಂತೆ ಆಗ್ರಹಿಸಿದರು.
ನಂತರ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ನಿಶಾಂತ್ ರಾವ್ 2024-2025 ನೇ ಸಾಲಿನ ವಾರ್ಷಿಕ ವರದಿ ಮಂಡಿಸಿದರು. ಹಾಗೂ 2026-2027 ನೇ ಸಾಲಿನ ನೂತನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಸ್ಥಾನಕ್ಕೆ ಶಿಕ್ಷಕ-ರಕ್ಷಕರ ಸಮ್ಮುಖದಲ್ಲಿ ಅವಿರೋಧ ಆಯ್ಕೆ ಮಾಡಲಾಯಿತು.ನಂತರ ಪದವಿ ಸೆಮಿಸ್ಟರ್ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿನಿಯರಿಗೆ ನಗದು ಬಹುಮಾನ ವಿತರಿಸಲಾಯಿತು. ಅಲ್ಲದೇ ಕಾಲೇಜಿನಲ್ಲಿ ವಿಶಿಷ್ಟ ಸಾಧನೆಗೈದ ಮಕ್ಕಳನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಐಕ್ಯುಎಸಿ ಸಂಯೋಜಿಕಿ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ಕೌಶಲ್ಯ ಆರ್ ಉಪಸ್ಥಿತರಿದ್ದರು ವೇದಿಕೆಯಲ್ಲಿ ಎಲ್ಲ ಬೋಧಕ ಬೋದಕೇತರ ವೃಂದ ಉಪಸ್ಥಿತರಿದ್ದು ತಮ್ಮ ಸ್ವ ಪರಿಚಯ ತಿಳಿಸಿ ಅಗತ್ಯ ಸಲಹೆ ಸೂಚನೆಗಳನ್ನು ತಿಳಿಸಿದರು.
ವಾಣಿಜ್ಯ ವಿಭಾಗದ ಉಪನ್ಯಾಸಕಿ ಸುಮನಾವರಾವ್ ಕಾರ್ಯಕ್ರಮ ಸ್ವಾಗತಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕಿ ಹರ್ಷಿತಾ ಕೆ.ಎಸ್.ಧನ್ಯವಾದ ಸಮರ್ಪಿಸಿದರು ಕನ್ನಡ ವಿಭಾಗ ಮುಖ್ಯಸ್ಥರಾದ ಗಿರೀಶ್ ಭಟ್.ಕೆ ಕಾರ್ಯಕ್ರಮ ನಿರೂಪಿಸಿದರು.

