ಚಿತ್ರದುರ್ಗ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇಗೌಡರನ್ನು ಲೈಂಗಿಕ ಕಿರುಕುಳ ಆರೋಪದ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಹಿರಿಯೂರು ಪೊಲೀಸರು ಗುಹಿಲಾಲ್ ಟೋಲ್ ಬಳಿ ದೇವರಾಜೇಗೌಡರನ್ನು ಬಂಧಿಸಿದ್ದಾರೆ. ಹಾಸನ ಪೊಲೀಸರು ನೀಡಿದ್ದ ಮಾಹಿತಿಯ ಆಧಾರದಲ್ಲಿ ಈ ಬಂಧನ ನಡೆದಿದೆ.
ದೇವರಾಜೇಗೌಡ ಮೇಲೂ ಲೈಂಗಿಕ ಕಿರುಕುಳದ ಆರೋಪವಿದೆ. ಅವರ ವಿರುದ್ಧವೂ ಏ.1ರಂದು ಎಫ್ ಐಆರ್ ದಾಖಲಾಗಿತ್ತು. ದೇವರಾಜೇಗೌಡ ತಮ್ಮ ಮನೆಗೆ ನುಗ್ಗಿ ನಿಂದಿಸಿ, ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿ ಮಹಿಳೆಯ ಪತಿ ದೂರು ದಾಖಲಿಸಿದ್ದಾರೆ. ಹೊಳೆನರಸಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.