ಉಡುಪಿ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅತ್ಯುನ್ನತ ಗೌರವಗಳಲ್ಲಿ ಒಂದಾದ ಡಿಜಿ & ಐಜಿಪಿ ಪ್ರಶಂಸನಾ ಡಿಸ್ಕ್ (DG & IGP’s Commendation Disc) ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕ (ಎಎಸ್‌ಐ) ರಾಜೇಶ್ ಪಿ. ಭಾಜನರಾಗಿದ್ದಾರೆ.
ಜುಲೈ 24ರಂದು ಬೆಂಗಳೂರಿನಲ್ಲಿ ನಡೆದ ಡಿಜಿ & ಐಜಿಪಿ ಪ್ರಶಂಸನಾ ಡಿಸ್ಕ್ ಇನ್ವೆಸ್ಟಿಚರ್ ಸಮಾರಂಭದಲ್ಲಿ, ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾನಿರೀಕ್ಷಕರಾದ ಡಾ. ಎಂ.ಎ. ಸಲೀಂ, ಐಪಿಎಸ್ ಅವರು ರಾಜೇಶ್ ಪಿ. ಅವರಿಗೆ ಪ್ರಶಂಸನಾ ಡಿಸ್ಕ್ ಪ್ರದಾನ ಮಾಡಿ ಗೌರವಿಸಿದರು.
2025–2026ನೇ ಸಾಲಿನಲ್ಲಿ ಕರ್ತವ್ಯನಿಷ್ಠೆ, ದಕ್ಷತೆ, ಪ್ರಾಮಾಣಿಕತೆ ಹಾಗೂ ಅತ್ಯುತ್ತಮ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು.
ರಾಜೇಶ್ ಪಿ. ಅವರ ಈ ಸಾಧನೆಗೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು ಹಾಗೂ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಗೌರವವು ಉಡುಪಿ ಜಿಲ್ಲೆ ಹಾಗೂ ಪಡುಬಿದ್ರಿ ಪೊಲೀಸ್ ಠಾಣೆಗೆ ಹೆಮ್ಮೆಯ ವಿಷಯವಾಗಿದೆ.

