ನಂದಳಿಕೆ ಬಾಲಚಂದ್ರ ರಾವ್ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸಂತಾಪ

0
166


ಉಜಿರೆ: ಕನ್ನಡ ನಾಡು, ನುಡಿ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಅನುಪಮ ಸೇವೆ-ಸಾಧನೆ ಮಾಡಿದ ನಂದಳಿಕೆ ಬಾಲಚಂದ್ರ ರಾವ್ ನಿಧನರಾದ ಬಗ್ಯೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗಾಢ ಸಂತಾಪ ವ್ಯಕ್ತಪಡಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದ್ದಾರೆ.

ಬ್ಯಾಂಕ್‌ಅಧಿಕಾರಿಯಾಗಿದ್ದರೂ, ಸಾಹಿತ್ಯ ಕ್ಷೇತ್ರದಲ್ಲಿ ಅವರು ವಿಶೇಷ ಆಸಕ್ತಿ, ಅನುಭವ ಹೊಂದಿದ್ದು, ಕವಿ ಮುದ್ದಣನ ಹುಟ್ಟೂರಾದ ಕಾರ್ಕಳ ತಾಲ್ಲೂಕಿನ ನಂದಳಿಕೆಯಲ್ಲಿ ಮುದ್ದಣ ಸ್ಮಾರಕ ಮಿತ್ರ ಮಂಡಲಿ ಮೂಲಕ ಅನೇಕ ಶಾಶ್ವತ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದಾರೆ. ದೂರ ಸಂಪರ್ಕ ಇಲಾಖೆಯ ಸಲಹಾ ಸಮಿತಿ ಸದಸ್ಯರಾಗಿಯೂ ಅವರು ಅನುಪಮ ಸೇವೆ ನೀಡಿದ್ದಾರೆ. ಹಲವಾರು ವರ್ಷಗಳಿಂದ ಧರ್ಮಸ್ಥಳದ ಅಭಿಮಾನಿಯೂ, ಭಕ್ತರೂ ಆಗಿದ್ದ ಅವರು ನಮ್ಮ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು ಎಂದು ಸ್ಮರಿಸಿದ ಹೆಗ್ಗಡೆಯವರು ಬಾಲಚಂದ್ರ ರಾವ್ ಅಗಲುವಿಕೆಯಿಂದ ಅವರ ಕುಟುಂಬವರ್ಗದವರಿಗೆ ಉಂಟಾದ ದುಖಃವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸಿದ್ದಾರೆ.

LEAVE A REPLY

Please enter your comment!
Please enter your name here