ಧರ್ಮಸ್ಥಳ: ಸುಬ್ರಹ್ಮಣ್ಯಕ್ಕೆ ತೆರಳುವ ಬಸ್ಸೊಂದು ರಿವರ್ಸ್ ತೆಗೆಯುವ ವೇಳೆ ಮಹಿಳೆಯೊಬ್ಬರು ಬಸ್ಸಿನಡಿಗೆ ಬಿದ್ದು ಸಾವಿಗೀಡಾದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಇಂದು ಮಧ್ಯಾಹ್ನ ನಡೆದ ಈ ಘಟನೆಯಲ್ಲಿ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಆಗಮಿಸಿದ್ದ ಮಹಿಳೆ ಸಾವಿಗೀಡಾಗಿದ್ದಾರೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರಕರಣ ದಾಖಲಾಗಿದೆ. ಮೃತ ಮಹಿಳೆಯ ಗುರುತು ಇನ್ನಷ್ಟೇ ಪತ್ತೆ ಹಚ್ಚಬೇಕಾಗಿದೆ. ಶವವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ.