ಉಡುಪಿ : ತಾಲೂಕಿನ ಕುಕ್ಕೆಹಳ್ಳಿ ವಲಯದ ಬೆಳ್ಳಂಪಳ್ಳಿ ಜೈ ಹಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಶಿಬಿರ ಹಾಗೂ ಗಿಡ ನಾಟಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮದ ಉದ್ಘಾಟಕರಾಗಿ ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಭಾಸ್ಕರ್ ಪೂಜಾರಿ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾಧ ವಿಜಯೇಂದ್ರ ನಾಯ್ಕ್ ಮುಖ್ಯ ಅತಿಥಿಗಳಾಗಿ ಯೋಜನೆಯ ಕೃಷಿ ಮೇಲ್ವಿಚಾರಕರಾದ ರಾಮು ಒಕ್ಕೂಟದ ಉಪಾಧ್ಯಕ್ಷರಾದ ಸುಧಾಕರ್ ಶಾಲಾ ಮುಖ್ಯ ಶಿಕ್ಷಕೀ ಮಲ್ಲಿಕಾ ಕಾರ್ಯಕ್ರಮವನ್ನು ಗಿಡಕ್ಕೆ ನೀರುಣಿಸುವ ಮೂಲಕ ಮೂಲಕ ಕಾರ್ಯ ಕ್ರಮವನ್ನು ಉದ್ಘಾಟಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ತಾಲೂಕು ಕೃಷಿ ಮೇಲ್ವಿಚಾರಕರಾದ ರಾಮು ಪ್ರಾಸ್ತಾವಿಕವಾಗಿ ಮಾತನಾಡಿ ಪರಿಸರ ರಕ್ಷಣೆ ನಮ್ಮೇಲ್ಲರ ಹೊಣೆ ಗಿಡಗಳನ್ನೂ ನೆಡುವುದರ ಜೊತೆಗೆ ಪಾಲನೆ ಪೋಷಣೆ ಮಾಡುವುದು, ಪರಿಸರ ನಮ್ಮೇಲರ ಸಂಪತ್ತು ಅದನ್ನು ಕಾಪಾಡುವುದು ನಮ್ಮೇಲರ ಕರ್ತವ್ಯ ವಾಗಿದೆ ಪ್ರತಿ ಒಂದು ಮಕ್ಕಳು ತಮ್ಮ ಹುಟ್ಟು ಹಬ್ಬವನ್ನು ಗಿಡ ನೆಡುವುದರ ಮೂಲಕ ಆಚರಣೆ ಮಾಡಿಕೊಳ್ಳಿ, ಎಂದು ತಿಳಿಸಿದರು.

ಶಾಲಾ ಶಿಕ್ಷಕಿ ಮಲ್ಲಿಕಾ ಮಾತನಾಡಿ ಮಕ್ಕಳು ಪರಿಸರ ಸಂರಕ್ಷಣೆ ಜೊತೆಗೆ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ,,,ಪ್ಲಾಸ್ಟಿಕ್ ನಿಷೇಧ ಮಾಡುವ ಕುರಿತು ತಿಳಿಸಿ ಕಾರ್ಯಕ್ರಮ ಅನುಷ್ಠಾನ ಮಾಡಿದ ಯೋಜನೆ ಅವರಿಗೆ ಧನ್ಯವಾದಗಳುತಿಳಿಸಿದರು ಒಕ್ಕೂಟದ ಅಧ್ಯಕ್ಷರಾದ ವಿಜಯೇಂದ್ರ ಮಾತನಾಡಿ ಪರಿಸರ ಕಾರ್ಯಕ್ರಮ ನಮ್ಮ ಗ್ರಾಮದ ಶಾಲೆಯಲ್ಲಿ ಯೋಜನೆ ವತಿಯಿಂದ ಕಾರ್ಯಕ್ರಮ ಹಮ್ಮಿಕೊಂಡಿದ್ದು ತುಂಬಾ ಸಂತೋಷ ಎಂದು ತಿಳಿಸಿದರು. ಕಾರ್ಯ ಕ್ರಮದಲ್ಲಿ ಶಾಲಾ ಮಕ್ಕಳಿಗೆ ಪರಿಸರಕ್ಕೆ ಸಂಬಂಧಿಸಿದಂತೆ ಪ್ರಬಂಧ ಸ್ಪರ್ಧೆ , ಚಿತ್ರ ಕಲೆ, ಪರಿಸರ ಗೀತೆ, ಭಾಷಣ ಕುರಿತು ಪ್ರಬಂಧ ಆಯೋಜನೆ ಮಾಡಿದ್ದು ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕೀ ಮಲ್ಲಿಕಾ ಕಾರ್ಯಕ್ರಮವನ್ನು ಸೇವಾ ಪ್ರತಿನಿಧಿ ಸುಧಾಕರ್ ನಿರ್ವಹಿಸಿದರು, ಶಾಲಾ ಶಿಕ್ಷಕಿ ಮಲ್ಲಿಕಾ ಸ್ವಾಗತಿಸಿದರು, ಶಾಲಾ ಶಿಕ್ಷಕಿ ಸುರೇಖಾ ವಂದಿಸಿದರು ಕಾರ್ಯ ಕ್ರಮದಲ್ಲಿ ಶಾಲಾ ಶಿಕ್ಷಕರು ಶಾಲಾ ಮಕ್ಕಳು ಉಪಸ್ಥಿತರಿದ್ದರು.

