ಧಾರವಾಡ : ವಿದ್ಯಾರ್ಥಿನಿಯ ಹತ್ಯೆ

0
109

19 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ನಗರದ ಹೊರವಲಯದಲ್ಲಿ ಎಸೆದು ಪರಾರಿಯಾಗಿರುವ ಘಟನೆ ವರದಿಯಾಗಿದೆ.

ಕೊಲೆಯಾದ ಯುವತಿ ಧಾರವಾಡದ ಗಾಂಧಿ ಚೌಕ್ ನಿವಾಸಿ ಝಕಿಯಾ ಮುಲ್ಲಾ (19) ಎಂದು ತಿಳಿದು ಬಂದಿದ್ದು,ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿದ್ದ ಈಕೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದಳು. ಮಂಗಳವಾರ ಸಂಜೆ ಮನೆಯಿಂದ ಲ್ಯಾಬ್‌ಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ಯುವತಿ, ರಾತ್ರಿಯಾದರೂ ಮನೆಗೆ ಹಿಂದಿರುಗಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

ಬುಧವಾರ ಮುಂಜಾನೆ ಮನಸೂರು ರಸ್ತೆಯ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸೇರಿದ ವಿನಯ್ ಡೈರಿ ಸಮೀಪ ಯುವತಿಯ ಶವ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.ಬೇರೆ ಯಾವುದೋ ಸ್ಥಳದಲ್ಲಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ, ನಂತರ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಇಲ್ಲಿಗೆ ತಂದು ಶವವನ್ನು ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಹಾಗೂ ವಿದ್ಯಾಗಿರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here