Wednesday, January 15, 2025
Homeಧಾರವಾಡಧಾರವಾಡ: ಟಿಟಿ ವಾಹನ - ಲಾರಿ ನಡುವೆ ಮುಖಾಮುಖಿ ಡಿಕ್ಕಿ, ಮೂವರ ಸಾವು

ಧಾರವಾಡ: ಟಿಟಿ ವಾಹನ – ಲಾರಿ ನಡುವೆ ಮುಖಾಮುಖಿ ಡಿಕ್ಕಿ, ಮೂವರ ಸಾವು

ಧಾರವಾಡ: ಟಿಟಿ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿರುವ ಅವಘಡ ಅಳ್ನಾವರ ತಾಲೂಕಿನ ಅಡಬಗಟ್ಟಿ ಸಮೀಪ ಮುಂಜಾನೆ ಸಂಭವಿಸಿದೆ.
ಮೃತರನ್ನು ಸವದತ್ತಿ ತಾಲೂಕಿನ ಶಿರಸಂಗಿಯ ಹನುಮಂತ ಮಲ್ಲಾಡ್ (36), ಮಹಾಂತೇಶ ಚವಾಣ (37) ಹಾಗೂ ಮಹಾದೇವಪ್ಪ ಹುಲ್ಲಳ್ಳಿ (39) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರಸಂಗಿಯಿಂದ ಗೋವಾ ಕಡೆಗೆ ತೆರಳುತ್ತಿದ್ದ ಲಾರಿ, ಗೋವಾದಿಂದ ಚಿತ್ರದುರ್ಗಕ್ಕೆ ಸಂಚರಿಸುತ್ತಿದ್ದ ಟೆಂಪೂಗೆ ಡಿಕ್ಕಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular