ಸಿಎಮ್ಎಫ್ಆರ್‌ಐನಲ್ಲಿ ಯಂಗ್ ಪ್ರೊಫೆಷನಲ್ ಹುದ್ದೆಗೆ ನೇರ ಸಂದರ್ಶನ

0
10

ಮಂಗಳೂರು: ಭಾರತೀಯ ಕೃಷಿ ಅನುಸಂಧಾನ ಪರಿಷತ್ (ICAR) ಅಧೀನದ ಕೇಂದ್ರೀಯ ಸಮುದ್ರ ಮೀನುಗಾರಿಕೆ ಸಂಶೋಧನಾ ಸಂಸ್ಥೆ (CMFRI) ಮಂಗಳೂರು ಪ್ರಾದೇಶಿಕ ಕೇಂದ್ರದಲ್ಲಿ ಯಂಗ್ ಪ್ರೊಫೆಷನಲ್-I ಹುದ್ದೆಯ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ.

ಪರಿಶಿಷ್ಟ ಜಾತಿ ಉಪ ಯೋಜನೆ (SCSP) ಅಡಿಯಲ್ಲಿ ಒಂದು ಹುದ್ದೆಯನ್ನು ಭರ್ತಿ ಮಾಡಲು 2026ರ ಡಿಸೆಂಬರ್ 8ರಂದು ಬೆಳಿಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದಂದು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಹುದ್ದೆಯ ಅರ್ಹತೆ, ವಿದ್ಯಾರ್ಹತೆ, ಅಗತ್ಯ ದಾಖಲೆಗಳು ಹಾಗೂ ಇತರ ಷರತ್ತುಗಳ ಕುರಿತು ಸಂಪೂರ್ಣ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ www.cmfri.org.in ಗೆ ಭೇಟಿ ನೀಡುವಂತೆ ಸೂಚಿಸಲಾಗಿದೆ.