ಬಂಟ್ವಾಳದಲ್ಲಿ 262 ಉಪಕರಣಗಳ ವಿತರಣೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ

0
8

ಬಂಟ್ವಾಳ : ಶಾಸಕರ ಕಚೇರಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣಗಳು ಹಾಗೂ ತರಬೇತಿ ಪಡೆದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿದರು. ಇದೇ ಸಂದರ್ಭದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಅವರ ಸಮಸ್ಯೆಗಳನ್ನು ಆಲಿಸಿದರು.

ಜಿಲ್ಲಾ ಪಂಚಾಯತ್ ಕೈಗಾರಿಕಾ ವಿಭಾಗದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಒಟ್ಟು 262 ಉಪಕರಣಗಳು ಮತ್ತು ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಈ ಮೂಲಕ ವೃತ್ತಿ ಕೌಶಲಾಭಿವೃದ್ಧಿ, ಮಹಿಳೆಯರ ಸ್ವಾವಲಂಬನೆ ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಯಿತು.