ಸರ್ಕಾರಿ ಸಂಯುಕ್ತ ಪ್ರೌಢಶಾಲೆ ಎರ್ಲಪಾಡಿಯಲ್ಲಿ 24-25 ನೇ ಸಾಲಿನ SSLC ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ನೀಡಿ ಶುಭ ಹಾರೈಸಲಾಯಿತು. ಈ ಸಂದರ್ಭದಲ್ಲಿ ಕಾರ್ಕಳದ ಮಹಾದಾನಿಗಳಾದ ಶ್ರೀಯುತ ಕಮಲಾಕ್ಷ ಕಾಮತ್ ಇವರು ಮಕ್ಕಳಿಗೆ ಪ್ರವೇಶ ಪತ್ರವನ್ನು ವಿತರಿಸಿ, ಪರೀಕ್ಷೆಗೆ ಹೇಗೆ ಸಿದ್ಧತೆ ನಡೆಸಬೇಕು ಮತ್ತು ವಿದ್ಯಾರ್ಥಿ ಜೀವನದಲ್ಲಿ ಆದರ್ಶ ಗುಣಗಳನ್ನು ಹೇಗೆ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು ಹಾಗೂ ಶಾಲಾ ಮಕ್ಕಳಿಗೆ ಸಿಹಿತಿಂಡಿ ವಿತರಿಸಿದರು. ಇದೇ ಸಂದರ್ಭದಲ್ಲಿ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿಯಾದ ಸುನಂದ ಎಲ್ಎಸ್ ವಿದ್ಯಾರ್ಥಿಗಳಿಗೆ ಪರೀಕ್ಷಾ ಪರಿಕರಗಳನ್ನು ನೀಡಿ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಕಾರ್ಕಳದ ಕೆನರಾ ಬ್ಯಾಂಕ್ ನ ನಿವೃತ್ತ ಮ್ಯಾನೇಜರ್ ಶ್ರೀ ಜಯರಾಮ್ ಕಾಮತ್, KEB ನಿವೃತ್ತ ಇಂಜಿನಿಯರ್ ಶ್ರೀ ಮುರಾರಿ ಚಿಪ್ಲುಣಕರ್, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀ ನರಂಗ ಕುಲಾಲ್, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ, ಪ್ರಾಥಮಿಕ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕ ಶ್ರೀ ಸುರೇಶ್ ಕುಮಾರ್ ಹಾಗೂ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಶುಭ ಹಾರೈಸಿದರು. ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಸ್ವಾಗತ ಕೋರಿದರು. ಶಿಕ್ಷಕಿ ಇಂದಿರಾ ನಿರೂಪಿಸಿ, ಶಿಕ್ಷಕಿ ಚೇತನ ಎಲ್ಲರಿಗೂ ವಂದಿಸಿದರು.
ಸರ್ಕಾರಿ ಸಂಯುಕ್ತ ಪ್ರೌಢಶಾಲೆ ಎರ್ಲಪಾಡಿಯಲ್ಲಿ 24-25 ನೇ ಸಾಲಿನ SSLC ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ವಿತರಣೆ
RELATED ARTICLES