ನೈತಿಕ ಮೌಲ್ಯಗಳ ಅರಿವು ಮೂಡಿಸುವ ಪುಸ್ತಕಗಳ ವಿತರಣೆ

0
5

ಬೆಳ್ತಂಗಡಿ ಇಲ್ಲಿಯ ಮೇಲಂತಬೆಟ್ಟುವಿನ ಮಂಜುಶ್ರೀ ನಗರದ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ (ರಿ) ಇಲ್ಲಿಯ ಭಜಕರಿಗೆ ಮತ್ತು ಮಕ್ಕಳಿಗೆ ನೈತಿಕ ಮೌಲ್ಯಗಳ ಬಗ್ಗೆ ಅರಿವು ಇರುವಂತಹ ಪುಸ್ತಕವನ್ನು ವಿತರಿಸಿ ಮಕ್ಕಳು ಮುಂದಕ್ಕೆ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಲು ಈ ಪುಸ್ತಕದಲ್ಲಿರುವ ಲೇಖನಗಳು ಸಹಕಾರಿಯಾಗಲಿ ಎಂದು ಶುಭ ಹಾರೈಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜುನಾಥೇಶ್ವರ ಭಜನಾ ಮಂಡಳಿಯ ಅಧ್ಯಕ್ಷರಾದ ವೇಣುಗೋಪಾಲ ಶೆಟ್ಟಿಯವರು ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಪಿ ಚಂದ್ರಶೇಖರ ಸಾಲ್ಯಾನ್, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ನಾಗೇಶ್ ಮೂಡಲ, ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಅರ್ಚಕರಾದ ಶ್ರೀಧರ್ ಭಟ್ ಭಜನಾ ಪರಿಷತ್ತಿನ ತಾಲೂಕು ಕಾರ್ಯದರ್ಶಿ ಚಂದ್ರಶೇಖರ ಗೌಡ ಇಂದಬೆಟ್ಟು, ತಾಲೂಕು ಕೋಶಾಧಿಕಾರಿ ಹಾಗೂ ವಲಯ ಅಧ್ಯಕ್ಷರಾದ ಗಣೇಶ್ ಕಣ್ಣಾಜೆ, ವಲಯ ಕಾರ್ಯದರ್ಶಿ ಸೂರಜ್, ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕರಾದ ರವಿ, ಯೋಜನೆಯ ಸೇವಾ ಪ್ರತಿನಿಧಿಗಳು ಭಜನಾ ಮಂಡಳಿಯ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರ ಪ್ರಾರಂಭದಲ್ಲಿ ಸೂರಜ್ ರವರು ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.