ಪಾಡ್ಯಾರು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸೌಲಭ್ಯಗಳ ವಿತರಣೆ

0
28


ಮೂಡುಬಿದಿರೆ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಡ್ಯಾರು ಇಲ್ಲಿ ವಿದ್ಯಾರ್ಥಿಗಳಿಗೆ ದಾನಿಗಳಿಂದ ಒದಗಿಸಲಾದ ಶಾಲಾ ಬ್ಯಾಗ್, ನೋಟ್ ಪುಸ್ತಕ, ಬರವಣಿಗೆ ಸಾಮಗ್ರಿಗಳು, ಊಟದ ಬಟ್ಟಲು, ಸ್ಟೀಲ್ ಲೋಟ ಮತ್ತು ನೀರಿನ ಬಾಟಲ್ ಮುಂತಾದವುಗಳನ್ನು ಸಂದೀಪನಿ ಸಾಧನಾಶ್ರಮದ ಕೇಮಾರು ಶ್ರೀ ಶ್ರೀ ಈಶ ವಿಠಲ ದಾಸ ಸ್ವಾಮೀಜಿಯವರು ವಿತರಿಸಿದರು. ಕಾರ್ಯಕ್ರಮದಲ್ಲಿ ಸರಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ನಾಗೇಶ್ ಎಸ್ ಶಾಲಾ ಅಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ರಾದ ಲಲಿತ ನೂತನ ಅಧ್ಯಕ್ಷ ರಮೇಶ್ ಆಚಾರ್ಯ ಉಪಸ್ಥಿತರಿದ್ದರು. ದಾನಿಗಳಾದ ಧೀರಜ್ ಶೆಣೈ , ಸುರೇಂದ್ರ ಕಾಮತ್ ಬೆಂಗಳೂರು, ಗೀತಾ ಉಮೇಶ್ ಕಿಣಿ ಮತ್ತು ಮಕ್ಕಳು ಮಣಿಪಾಲ, ಪ್ರತಿಭಾ ಶೆಣೈ, ಅಶೋಕ್ ಮಲ್ಯಾ ಮೂಡುಬಿದಿರೆ ಇವರ ಕೊಡುಗೆಯನ್ನು ಸ್ಮರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ಪ್ರಸನ್ನ ಶೆಣೈ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರೆ ಸ್ವಯಂಸೇವಕ ಶಿಕ್ಷಕಿ ಪ್ರತಿಭಾ ಮತ್ತು ಮಲ್ಲಿಕಾ ಸಹಕರಿಸಿ ಸಹ ಶಿಕ್ಷಕ ರಾಬರ್ಟ್ ವಂದಿಸಿದರು.

LEAVE A REPLY

Please enter your comment!
Please enter your name here