ಸೆ. 21ರಂದು ಜೈನ ವಿದ್ಯಾರ್ಥಿ ಪ್ರೋತ್ಸಾಹಧನ ವಿತರಣೆ

0
8

ಉಜಿರೆ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜೈನಧರ್ಮೀಯ ವಿದ್ಯಾರ್ಥಿಗಳಿಗೆ ಸೆ. 21ರಂದು ಸೋಮವಾರ ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ಕೆಲ್ಲಗುತ್ತು ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಮೆಮೋರಿಯಲ್ ಟ್ರಸ್ಟ್ ಮತ್ತು ಶ್ರಾವಕರು, ಶ್ರಾವಿಕೆಯರ ಸಹಕಾರದಿಂದ ವಿದ್ಯಾರ್ಥಿ ಪ್ರೋತ್ಸಾಹಧನ ವಿತರಿಸಲಾಗುವುದು ಎಂದು ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ ಬಳ್ಳಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪಿ.ಯು.ಸಿ. ಪದವಿ ತರಗತಿ, ಐ.ಟಿ.ಐ., ಪೊಲಿಟೆಕ್ನಿಕ್, ಎಂಜಿನಿಯರಿAಗ್, ವೈದ್ಯಕೀಯಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಬಸದಿಯಲ್ಲಿ ದೊರಕುವ ನಿಗದಿತ ಅಜಿನಮೂನೆಯಲ್ಲಿ ಸವಿವರ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸಬೇಕು.

ಭರ್ತಿಮಾಡಿದ ಅರ್ಜಿಯನ್ನು ಆಗೋಸ್ತು 21 ರ ಒಳಗೆ ಈ ವಿಳಾಸಕ್ಕೆ ಕಳುಹಿಸಿ ಕೊಡಬೇಕು.

ವಿಳಾಸ: ಕೆ. ಜಯವರ್ಮರಾಜಬಳ್ಳಾಲ್, ಅನುವಂಶಿಕ ಮೊಕ್ತೇಸರರು, ರತ್ನತ್ರಯ ಜೈನ ತೀರ್ಥಕ್ಷೇತ್ರ, ಜೈನಪೇಟೆ, ಬೆಳ್ತಂಗಡಿ – 574 214.

ಉಭಯ ಜಿಲ್ಲೆಗಳಲ್ಲಿ ಕ್ಯಾನ್ಸರ್, ಕಿಡ್ನಿ, ಹೃದಯ ಸಂಬಂಧಿ  ರೋಗ ಪೀಡಿತರಿಗೂ ಆರ್ಥಿಕ ನೆರವು ನೀಡಲಾಗುವುದು.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಮೊಬೈಲ್:9448180439

ಸೆ. 21 ರಂದು ಸೋಮವಾರ ಹೊಂಬುಜ ಜೈನಮಠದ ಪೂಜ್ಯ ದೇವೇಂದ್ರಕೀರ್ತಿ ಭಟ್ಟಾರಕ ದಿವ್ಯ ಉಪಸ್ಥಿತಿ ಮತ್ತು ಆಶೀರ್ವಾದಗಳೊಂದಿಗೆ ಪ್ರೋತ್ಸಾಹಧನ ವಿತರಿಸಲಾಗುವುದು ಎಂದು ಕೆ. ಜಯವರ್ಮರಾಜಬಳ್ಳಾಲ್ ತಿಳಿಸಿದ್ದಾರೆ.