ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಪಟ್ಲ ಯಕ್ಷಾಶ್ರಯ ಯೋಜನೆಯಡಿಯಲ್ಲಿ ನಿರ್ಮಾಣವಾಗುತ್ತಿರುವ ಮನೆಗಳಿಗೆ, ಹಾಗೂ ಕಲಾವಿದರ ತುರ್ತು ಆರೋಗ್ಯ ಚಿಕಿತ್ಸಾ ವೆಚ್ಚಕ್ಕೆ ಸುಮಾರು 20 ಲಕ್ಷ ರೂಪಾಯಿ ಮೊತ್ತದ ಚೆಕ್ಕನ್ನು ವಿತರಿಸಲಾಯಿತು.
ಇಂದು (ದಿನಾಂಕ 26-06-24) , CA ಸುದೇಶ್ ಕುಮಾರ್ ರೈ ಇವರ ಕಛೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಒಟ್ಟು 15 ಮಂದಿ ಕಲಾವಿದರಿಗೆ (ಬಡಗುತಿಟ್ಟು 9+ ತೆಂಕುತಿಟ್ಟು 5+ ದೈವಾರಾಧನಾ ಕಲಾವಿದ 1) ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರು ವಿತರಿಸಿದರು.
ಈ ಸಂದರ್ಭದಲ್ಲಿ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳಾದ ಶ್ರೀಗಳಾದ CA ಸುದೇಶ್ ಕುಮಾರ್ ರೈ, ಪುರುಷೋತ್ತಮ ಭಂಡಾರಿ ಅಡ್ಯಾರ್, ಕದ್ರಿ ನವನೀತ ಶೆಟ್ಟಿ, ಪ್ರದೀಪ ಆಳ್ವ ಕದ್ರಿ, ರವಿ ಶೆಟ್ಟಿ ಅಶೋಕನಗರ, ಬಾಳ ಜಗನ್ನಾಥ ಶೆಟ್ಟಿ, ಡಾ. ಪ್ರಖ್ಯಾತ್ ಶೆಟ್ಟಿ, CA ವೃಂದಾ ಕೊನ್ನಾರ್ ಉಪಸ್ಥಿತರಿದ್ದರು.