ಬಜಗೋಳಿ: ಮುಡಾರು ಗ್ರಾಮ ಪಂಚಾಯತ್ ನ ಡಾ ವಿ.ಎಸ್ ಆಚಾರ್ಯ ಸಭಾಭವನದಲ್ಲಿ ಶಾಸಕರಾದ ವಿ ಸುನಿಲ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ಮತ್ತು ಸರಕಾರದ ವಿವಿಧ ಸವಲತ್ತು ಮತ್ತು ಮುಡಾರು ಗ್ರಾಮ ಪಂಚಾಯತ್ ನ ಸ್ವಂತ ಅನುದಾನದಲ್ಲಿ ಸಹಾಯಧನ ಶಾಲೆಗಳಿಗೆ, ಕ್ರೀಡೋಪಕರಣ ವಿತರಣಾ ಕಾರ್ಯಕ್ರಮವು ನೆರವೇರಿತು.
ಗ್ರಾಮ ಪಂಚಾಯತ್ ನ ಸ್ವಂತ ಅನುದಾನದ ಶೇ.25 ನಿಧಿಯಲ್ಲಿ ವೈಧ್ಯಕೀಯ ಸಹಾಯಧನ, ಶೈಕ್ಷಣಿಕ ಸಹಾಯಧನ, ಸ್ಕೂಲ್ ಮಕ್ಕಳಿಗೆ ಅತ್ಯುನ್ನತ ಗುಣಮಟ್ಟದ ಸ್ಕೂಲ್ ಬ್ಯಾಗ್ ವಿತರಣೆ
ಗ್ರಾಮ ಪಂಚಾಯತ್ ನ ಸ್ವಂತ ಅನುದಾನದ ಶೇ.5 ನಿಧಿಯಲ್ಲಿ ವೈಧ್ಯಕೀಯ ಸಹಾಯಧನ ನೀಡಲಾಯಿತು.
ಗ್ರಾಮ ಪಂಚಾಯತ್ ನ ಸ್ವಂತ ಅನುದಾನದ ಶೇ.2 ನಿಧಿಯಲ್ಲಿ ಗ್ರಾಮದ ವ್ಯಾಪ್ತಿಯ ಎಲ್ಲಾ ಶಾಲೆಯ ಮತ್ತು ಅಂಗನವಾಡಿ ಮಕ್ಕಳಿಗೆ ಕ್ರೀಡಾ ಸಾಮಾಗ್ರಿ ವಿತರಣೆ ಮಾಡಲಾಯಿತು.
ರಾಜ್ಯ ಸರಕಾರದ ಕಾರ್ಮಿಕ ಇಲಾಖೆಯಿಂದ ಕಾರ್ಮಿಕ ಕಿಟ್ ನ್ನು ವಿತರಿಸಲಾಯಿತು.
ಕೇಂದ್ರ ಸರಕಾರದ ವಿಶೇಷ (ADIP) ಯೋಜನೆಯಡಿ ವಿಕಲಚೇತನರಿಗೆ ಉಚಿತ ಸಾಧನ ಸಲಕರಣೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ 33 ವರ್ಷಗಳ ಕಾಲ ಅಂಗನವಾಡಿ ಕಾರ್ಯಕರ್ತೆಯಾಗಿ ಕಾರ್ಯ ನಿರ್ವಹಿಸಿ ಸ್ವಯಂ ನಿವೃತ್ತಿ ಘೋಷಿಸಿದ ರಾಷ್ಟ್ರ ಪ್ರಶಸ್ತಿ ವಿಜೇತೆ ಕಾರ್ಯಕರ್ತೆ ಪದ್ಮಾವತಿ ಅಮೀನ್ ಅವರನ್ನು & ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ ಪಡೆದ ಅವ್ನಿ ಪಿ ಜೈನ್ ರವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮುಡಾರು ಗ್ರಾಮ ಪಂಚಾಯತ್ ನ ಜನಪರ ಕಾರ್ಯಗಳ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೃತಿ ಡಿ ಅತಿಕಾರಿಯವರು ಪ್ರಸ್ತಾವಿಕವಾಗಿ ಮಾತನಾಡಿದರು. ಶಾಸಕರಾದ ವಿ ಸುನಿಲ್ ಕುಮಾರ್ ರವರು ವಿವಿಧ ಸವಲತ್ತು ವಿತರಣೆ ಮಾಡಿ ಸಾರ್ವಜನಿಕ ಅಹವಾಲು ಸ್ವೀಕಾರ ಮಾಡಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾರ್ಕಳ ತಹಶೀಲ್ದಾರ್ ಪ್ರದೀಪ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯವರಾದ ಶಶಿಧರ ಕೆ ಜಿ, ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ವಿಜಯ, ಮುಡಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೃತಿ ಡಿ ಅತಿಕಾರಿ, ನಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಶೋಕ್ ಪೂಜಾರಿ, ಮಾಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಮೇಶ್ ಪೂಜಾರಿ, ಈದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸದಾನಂದ ಪೂಜಾರಿ, ಮಿಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸನ್ಮತಿ ನಾಯಕ್ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಮುಡಾರು ಗ್ರಾಮ ಪಂಚಾಯತ್ ನ ಪಿ.ಡಿ.ಓ ರಮೇಶ್ ಎಸ್ ನಿರ್ವಹಿಸಿದರು.
ಮುಡಾರು ಗ್ರಾಮ ಪಂಚಾಯತ್‌ನಲ್ಲಿ ವಿವಿಧ ಸವಲತ್ತು ಹಾಗೂ ಹಕ್ಕು ಪತ್ರ ವಿತರಣೆ
RELATED ARTICLES