ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದಲ್ಲಿ ವಾಟರ್ ಬೆಡ್ ವಿತರಣೆ

0
14

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ಪಾಣೆಮಂಗಳೂರು ವಲಯ ಶಂಭುರು ಕಾರ್ಯಕ್ಷೇತ್ರದ
ಮುತ್ತಮ್ಮ ಕಂಬಳದಡ್ಡ ಅನಾರೋಗ್ಯದಿಂದ ಪ್ರಸ್ತುತ ಮಲಗಿದ್ದಲ್ಲಿರುವ ಕಾರಣ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದ ಅಡಿಯಲ್ಲಿ ವಾಟರ್ ಬೆಡ್ ವಿತರಣೆ ಮಾಡಲಾಯಿತು.

ಈ ಸಂದರ್ಭ ಜನಜಾಗೃತಿ ವೇದಿಕೆಯ ವಲಯ ಸದಸ್ಯರಾದ ಪುರುಷೋತ್ತಮ ನಾಟಿ, ಪಾಣೆಮಂಗಳೂರು ವಲಯ ಮೇಲ್ವಿಚಾರಕಿ ಶಿವಲಕ್ಷ್ಮಿ, ನರಿಕೊಂಬು ಗ್ರಾಮ ಪಂಚಾಯತ್ ನಿಕಟ ಪೂರ್ವ ಉಪಾಧ್ಯಕ್ಷೆ ಮೋಹಿನಿ, ಕಾರ್ಯಕ್ಷೇತ್ರದ ಒಕ್ಕೂಟ ಸೇವಾ ಪ್ರತಿನಿಧಿ ಲಕ್ಷ್ಮಿ ಉಪಸ್ಥಿತರಿದ್ದರು.