ಬಂದಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ,ಉಜಿರೆ ವಲಯದ, ಬೈಪಾಡಿ ಕಾರ್ಯಕ್ಷೇತ್ರದ ಕರ್ಲೋಡಿ ನಿವಾಸಿ ಲಕ್ಷ್ಮೀಯವರು ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ಗೆ ಬೇಡಿಕೆ ನೀಡಿದ್ದು.ಸದ್ರಿ ಬೇಡಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ಮಂಜೂರು ಮಾಡಿರುತ್ತಾರೆ. ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ವಿತರಣೆ ಮಾಡಿದರು , ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಶಶಿಧರ ಗೌಡ ಬಾಲಂಪಾಡಿ, ಒಕ್ಕೂಟದ ಪದಾಧಿಕಾರಿಯವರಾದ ದಿನೇಶ್ ಅಡ್ದಾರು ,ಗೀತಾ, ಅನಿತ, ಉಜಿರೆ ವಲಯದ ಮೇಲ್ವಿಚಾರಕಿ ವನಿತಾ, ಸೇವಾಪ್ರತಿನಿದಿ ಪ್ರಮೀಳಾ ಉಪಸ್ಥಿತರಿದ್ದರು.