ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿರುವ ಗುಂಡು ಶೆಟ್ಟಿ ಕಂಬಳ ಮನೆ ಕಪ್ಪೆಟ್ಟು (88 ವರ್ಷ) ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಕಳೆದ ಐದು ದಶಕಗಳಿಂದ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕಪ್ಪೆಟ್ಟು ಇದರ ಶೆಟ್ಟಿ ಬಾಲೆ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದ ಗುಂಡು ಶೆಟ್ಟಿ ಕಪ್ಪೆಟ್ಟು ಅವರು ತನ್ನ ನೇರ ನಡೆ-ನುಡಿಗಳಿಂದ ಜನಾನುರಾಗಿಯಾಗಿದ್ದು, ದೈವಾರಾಧನೆ ಸಹಿತ ದೈವಸ್ಥಾನಗಳ ಧಾರ್ಮಿಕ ಆಚರಣೆಗಳಲ್ಲಿ ಸಕ್ರಿಯ ಪಾತ್ರ ವಹಿಸುತ್ತಿದ್ದರು.
ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುಂಡು ಶೆಟ್ಟಿ ಕಪ್ಪೆಟ್ಟು ಅವರ ನಿಧನಕ್ಕೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಬಿಜೆಪಿ ಮುಖಂಡ ರವಿ ಅಮೀನ್ ಬನ್ನಂಜೆ, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು ಮುಂತಾದವರು ಸಂತಾಪ ಸೂಚಿಸಿದ್ದಾರೆ.

