ಬಿಜೆಪಿ ಸಕ್ರಿಯ ಕಾರ್ಯಕರ್ತ ಉಡುಪಿ ವಿಧಾನಸಭಾ ಕ್ಷೇತ್ರದ ಮಾಯಾಡಿ ಕೊಳಲಗಿರಿ ನಿವಾಸಿ (45 ವ) ನಿವಾಸಿ ಮಿಲ್ಟನ್ ಡಿಸೋಜ ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಸಂತಾಪ ವ್ಯಕ್ತಪಡಿಸಿದೆ.
ವಿವಿಧ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದ ಅವರು ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದರು.
ಮಿಲ್ಟನ್ ಡಿಸೋಜ ಅವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಬಿಜೆಪಿ ಮುಖಂಡ ಎಂ.ಸಲೀಂ ಅಂಬಾಗಿಲು, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿಸೋಜ ಸಹಿತ ಸ್ಥಳೀಯ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಸಂತಾಪ ವ್ಯಕ್ತಪಡಿಸಿದ್ದಾರೆ.