ಉಡುಪಿ ನಗರಸಭೆಗೆ ನೂತನವಾಗಿ ಆಯ್ಕೆಗೊಂಡಿರುವ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಮತ್ತು ಉಪಾಧ್ಯಕ್ಷೆ ರಜನಿ ಹೆಬ್ಬಾರ್ ಅವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಶಾಲು ಹೊದೆಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ದೆ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು ಉಪಸ್ಥಿತರಿದ್ದರು.