ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆಯಲ್ಲಿ ಪಂಡಿತ್ ಜೀ ಅವರ ಜೀವನಾದರ್ಶಗಳ ಕುರಿತು ಉಪನ್ಯಾಸ ನೀಡಿದ ಬಿಜೆಪಿ ತೆಲಂಗಾಣ ರಾಜ್ಯಾಧ್ಯಕ್ಷ ಎನ್.ರಾಮಚಂದ್ರ ರಾವ್ ಅವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ಶಾಲು ಹೊದೆಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿ ಕೊಡಗು ಮಾಜಿ ಜಿಲ್ಲಾಧ್ಯಕ್ಷ ಭಾರತೀಶ್, ಬಿಜೆಪಿ ಉಡುಪಿ ಮಾಜಿ ಜಿಲ್ಲಾಧ್ಯಕ್ಷರುಗಳಾದ ಕುಯಿಲಾಡಿ ಸುರೇಶ್ ನಾಯಕ್, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಸಹಿತ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.