ಉಡುಪಿ ಜಿಲ್ಲಾ ಪಂಚಾಯತ್ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರ ರವರ ಅಧ್ಯಕ್ಷತೆಯಲ್ಲಿ ಇಂದು ದಿನಾಂಕ 24-01-2025 ರಂದು ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (DISHA) ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಕೇಂದ್ರ ಸರ್ಕಾರ ವಿವಿಧ ಯೋಜನೆಗಳ ಬಗ್ಗೆ ಮತ್ತು ಪ್ರಸ್ತುತ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶ್ ಪಾಲ್ ಸುವರ್ಣ, ಗುರುರಾಜ್ ಗಂಟೆಹೊಳೆ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಶ್ರೀ ಕಿಶೋರ್ ಕುಮಾರ್ ಪುತ್ತೂರು, ಜಿಲ್ಲಾಧಿಕಾರಿಗಳಾದ ಡಾ. ವಿದ್ಯಾ ಕುಮಾರಿ ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗಣಪತಿ ನಾಯಕ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.