ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ )ಹಾಗೂ ಪದುವ ಪದವಿಪೂರ್ವ ಕಾಲೇಜು ಮಂಗಳೂರು ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಈ ತಂಡದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಸ್ಪೂರ್ತಿ ಜಿ ಬಲ್ಲಾಲ್ , ಸ್ವಪ್ನ, ದ್ವಿತೀಯ ವಿಜ್ಞಾನ ವಿಭಾಗದ ಅನನ್ಯ ಎಸ್ ಹಾಗೂ ಪ್ರಥಮ ಕಲಾ ವಿಭಾಗದ ಎ ಶ್ರೀದೇವಿ ಭಟ್ ಭಾಗವಹಿಸಿರುತ್ತಾರೆ .ಪ್ರಥಮ ವಿಜ್ಞಾನ ವಿಭಾಗದ ಸಾನ್ವಿ ಚನಿಲ ಅವರು ಐದನೇ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗು ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ
Home Uncategorized ಜಿಲ್ಲಾಮಟ್ಟದ ಚೆಸ್ ಪಂದ್ಯಾಟ -ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ.

