ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿನಿಯಮಿತ, ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್, ಎಸ್. ಡಿ . ಸಿ. ಸಿ ಬ್ಯಾಂಕ್ ಕಟ್ಟಡ ಕೊಡಿಯಲ್ ಬೈಲ್, ಮಂಗಳೂರು ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆಸಿದ ಚರ್ಚಾ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅರ್ಪಿತ. ಎ ಭಾಗವಹಿಸಿರುತ್ತಾರೆ.
ಇವರು “ ಸಹಕಾರ ಚಳುವಳಿಯಲ್ಲಿ ಅಧಿಕ ಸಂಖ್ಯೆಯ ಮಹಿಳೆಯರು ಮತ್ತು ಯುವಜನರು ಪಾಲ್ಗೊಂಡರೆ ಮಾತ್ರವೇ ರಾಷ್ಟ್ರದ ಆರ್ಥಿಕ ಪ್ರಗತಿ ಸಾಧ್ಯ ” ಎಂಬ ವಿಷಯದ ಪರವಾಗಿ ಮಾತನಾಡಿ ಪ್ರಥಮ ಸ್ಥಾನವನ್ನು ಪಡೆದಿರುವರು. ಇವರ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಯಿತು. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ – ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

