
ಕಡಂದಲೆ: ಕಾಂಚನ ಪ್ರೌಢಶಾಲೆ, ಉಪ್ಪಿನಂಗಡಿ ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಜಂಪ್ ರೋಪ್ ಸ್ಪರ್ಧೆಯಲ್ಲಿ “ಸ್ಪೀಡ್ 30 ಸೆಕೆಂಡ್ ಡಬಲ್ ಇನ್” ವಿಭಾಗದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆ ಕಡಂದಲೆಯ 9ನೇ ತರಗತಿಯ ವಿದ್ಯಾರ್ಥಿಯಾದ ಮಂಜುನಾಥ ದಡ್ಡಿ ಇವನು ಜಿಲ್ಲಾಮಟ್ಟದಲ್ಲಿ ಮೂರನೇ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ. ಹಾಗೂ “30 ಸೆಕೆಂಡ್ ಸ್ಪೀಡ್ ವಿಭಾಗದಲ್ಲಿ” ನಮ್ಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಯಾದ ಲಕ್ಷ್ಮಣ ಮತ್ತು ಹತ್ತನೇ ತರಗತಿ ವಿದ್ಯಾರ್ಥಿಯಾದ ಸುನಿಲ್ ಕುಮಾರ್ ಇವರು ಜಿಲ್ಲಾಮಟ್ಟದಲ್ಲಿ ಮೂರನೇ ಮತ್ತು ನಾಲ್ಕನೇ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲಾ ಸಂಚಾಲಕರು, ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು, ಶಿಕ್ಷಕೇತರ ವರ್ಗದವರು , ಶಾಲಾ ಆಡಳಿತ ಮಂಡಳಿಹಾಗೂ ಶಾಲೆ ಎಲ್ಲಾ ಹಳೆ ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.