ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ 25-26

0
7

ದ.ಕ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪ.ಪೂ.) ಹಾಗೂ ಆಳ್ವಾಸ್ ಪ.ಪೂ. ಕಾಲೇಜು ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟ 25-26 ನವೆಂಬರ್ 21ರಂದು ಸ್ವರಾಜ್ಯ ಮೈದಾನದಲ್ಲಿ ಉದ್ಘಾಟಿಸಲ್ಪಟ್ಟಿತು.

ಧ್ವಜಾರೋಹಣಗೈದು ಕ್ರೀಡೆಾಕೂಟವನ್ನು ಉದ್ಘಾಟಿಸಿದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮಾತನಾಡಿ ತಾಲೂಕು ಮಟ್ಟದಲ್ಲಿ ಸಿಂಥೆಟಿಕ್ ಟ್ರ್ಯಾಕ್ ಇರುವ ಏಕೈಕ ಪ್ರದೇಶ ಮೂಡುಬಿದರೆ. ಡಾ ಮೋಹನ್ ಆಳ್ವರ ಹಿರಿತನದಲ್ಲಿ ಕ್ರೀಡಾ ಮಂತ್ರಿಯಾಗಿದ್ದಾಗ ಈ ಕೆಲಸ ಆಗಿರುತ್ತದೆ. ಕ್ರೀಡಾಳುಗಳಿಗೆ ಉತ್ತಮ ಅವಕಾಶಗಳನ್ನು, ಸಲಕರಣೆಗಳನ್ನು ಒದಗಿಸುವ ಪ್ರಯತ್ನವನ್ನು ತಾಲೂಕು ಮಟ್ಟದಲ್ಲಿ ಮಾಡಲಾಗಿರುತ್ತದೆ. ಅದನ್ನು ಸದುಪಯೋಗಿಸಿಕೊಳ್ಳಬೇಕೆಂದು ಕೇಳಿಕೊಂಡರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉಪನಿರ್ದೇಶಕಿ ರಾಜೇಶ್ವರಿ ಮಾತನಾಡಿ ವಿದ್ಯಾರ್ಥಿಗಳಿಗೆ ದೈಹಿಕ ಹಾಗೂ ಶಾರೀರಿಕ ವ್ಯಾಯಾಮಗಳು ಕ್ರೀಡಾಕೂಟಗಳಿಂದ ಲಭ್ಯವಾಗುತ್ತದೆ. ಇದರಿಂದ ಮಾನಸಿಕ ನೆಮ್ಮದಿಯೂ ಲಭ್ಯವಾಗುತ್ತದೆ ಎಂದರು. ವೇದಿಕೆಯಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ಸುಧಾಕರ್ ಶೆಟ್ಟಿ, ಜಿಲ್ಲಾ ಕ್ರೀಡಾ ಸಂಯೋಜಕ ಎಡಪದವು ಪ್ರೇಮನಾಥ ಶೆಟ್ಟಿ, ಹಾಜರಿದ್ದರು. ಆಳ್ವಾಸ್ ಪ.ಪೂ. ಕಾಲೇಜು ಪ್ರಾಂಶುಪಾಲ ಪ್ರೊ.ಮೊಹಮ್ಮದ್ ಸದಾಕತ್ ಸ್ವಾಗತಿಸಿದರು. ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.