Monday, January 13, 2025
HomeUncategorizedಜಿಲ್ಲಾ ಮಟ್ಟದ ವೃತ್ತಿಪರ ಕ್ರೀಡಾಕೂಟ ಉದ್ಘಾಟನಾ ಸಮಾರಂಭ

ಜಿಲ್ಲಾ ಮಟ್ಟದ ವೃತ್ತಿಪರ ಕ್ರೀಡಾಕೂಟ ಉದ್ಘಾಟನಾ ಸಮಾರಂಭ

ಕ್ರೀಡೆಯಿಂದ ಮಾನಸಿಕ ಆರೋಗ್ಯ ವೃದ್ಧಿ : ಡಾ|| ಚೂಂತಾರು

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಜಿಲ್ಲಾ ಮಟ್ಟದ ವೃತ್ತಿಪರ ಕ್ರೀಡಾಕೂಟ 2024 ಇದರ ಉದ್ಘಾಟನಾ ಸಮಾರಂಭವು ದಿನಾಂಕ: 03-12-2024 ಮಂಗಳವಾರದಂದು ಮೇರಿಹಿಲ್‍ನ ಜಿಲ್ಲಾ ಗೃಹರಕ್ಷಕದಳದ ಕಛೇರಿ ಆವರಣದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗೃಹರಕ್ಷಕರ ಜಿಲ್ಲಾ ಮಟ್ಟದ ವೃತ್ತಿಪರ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು ಎಲ್ಲಾ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರಿಗೆ ದೈಹಿಕ ಕ್ಷಮತೆ ಅತೀ ಅಗತ್ಯ ಈ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಅತೀ ಅವಶ್ಯಕ, ಉತ್ತಮ ಆಹಾರ ಸೇವನೆಯಿಂದ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಇಂತಹ ಕ್ರೀಡಾಕೂಟಗಳಿಂದ ಮಾನಸಿಕ ಒತ್ತಡ ಕಡಿಮೆ ಆಗಿ ಮಾನಸಿಕ ಆರೋಗ್ಯ ವೃದ್ದಿಸುತ್ತದೆ ಆಟದಲ್ಲಿ ಸೋಲು-ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು.

ಯಾವುದೇ ವೃತ್ತಿ ಅಥವಾ ಯಾವುದೇ ಕೆಲಸ ಮಾಡುವಾಗ ನಮ್ಮ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತೀ ಅವಶ್ಯಕ. ಆರೋಗ್ಯವನ್ನು ಕಾಪಾಡಿಕೊಳ್ಳಲು ನಿರಂತರವಾದ ದೈಹಿಕ ಚಟುವಟಿಕೆಗಳಿಗೆ ಪೂರಕವಾದಂತಹ ಕ್ರೀಡಾಕೂಟಗಳು ಅಗತ್ಯ ಎಂದು ನುಡಿದರು.
ಈ ಸಂದರ್ಭದಲ್ಲಿ ಶ್ಯಾಮಲಾ ಎ. ಪ್ರಥಮ ದರ್ಜೆ ಸಹಾಯಕಿ, ಮಂಗಳೂರು ಘಟಕದ ಘಟಕಾಧಿಕಾರಿ ಸೀನಿಯರ್ ಪ್ಲಟೂನ್ ಕಮಾಂಡರ್ ಮಾರ್ಕ್ ಶೇರಾ, ಉಳ್ಳಾಲ ಘಟಕದ ಘಟಕಾಧಿಕಾರಿ ಸುನಿಲ್ ಮತ್ತು ಹಿರಿಯ ಗೃಹರಕ್ಷಕ ಸುನಿಲ್ ಕುಮಾರ್ ಹಾಗೂ ಜಿಲ್ಲಾ ಗೃಹರಕ್ಷಕ ದಳದ 55 ಮಂದಿ ಗೃಹರಕ್ಷಕ/ಗೃಹರಕ್ಷಕಿಯರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular