ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೊಂಜಾಡಿ ಭಜನಾ ಮಂಡಳಿಗೆ ರಾಜಧಾನಿಯಲ್ಲೊಂದು “ರಾಷ್ಟ್ರೀಯ ಮಟ್ಟದ ಪ್ರಶಸ್ತಿ” ಗೌರವ

0
20

ಹೆಬ್ರಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿಗೆ ಬಸವ ಜಯಂತಿ ಅಂಗವಾಗಿ ನೀಡಲಾಗುವ “ಬಸವಶ್ರೀ ಕಾಯಕ ಶ್ರೇಷ್ಠ” ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಲಭಿಸಿರುವುದು. ಗ್ರಾಮಕ್ಕೆ ಹೆಮ್ಮೆಯ ವಿಚಾರವಾಗಿದೆ.

ಬೆಂಗಳೂರು ನಗರದ ರವೀಂದ್ರ ಕಲಾಕ್ಷೇತ್ರ ಅವರಣದ ಕನ್ನಡ ಭವನದ ನಯನ ಸಭಾಂಗಣದಲ್ಲಿ ದಿನಾಂಕ 23-05-2026 ಶನಿವಾರ ಸಂಜೆ 5 ಗಂಟೆಗೆ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಗೌರವ ಪ್ರದಾನ ಮಾಡಲಾಗುತ್ತದೆ.

ನಾಡಿನ ಏಳಿಗೆ, ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ “ಬಸವಶ್ರೀ ಕಾಯಕ ಶ್ರೇಷ್ಠ” ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಈ ಸಾಲಿನಲ್ಲಿ ಕೊಂಜಾಡಿಯ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿಯ ಸೇವೆಯನ್ನು ಪರಿಗಣಿಸಿ ರಾಷ್ಟ್ರೀಯ ಮಟ್ಟದ ಗೌರವಕ್ಕೆ ಆಯ್ಕೆ ಮಾಡಲಾಗಿದೆ.

ಅಂದು ಮಧ್ಯಾಹ್ನ 2:30ರಿಂದಲೇ ಸಾಂಸ್ಕೃತಿಕ ಉತ್ಸವ ಆರಂಭವಾಗಲಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ, ನೃತ್ಯ ಹಾಗೂ ಕಲಾ ಪ್ರದರ್ಶನಗಳು ನಡೆಯಲಿವೆ. ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಗಣ್ಯರು, ಕಲಾವಿದರು ಹಾಗೂ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ.

ಭಜನಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಗ್ರಾಮಸ್ಥರು ಈ ಪ್ರಶಸ್ತಿ ಗೌರವಕ್ಕೆ ಸಂತಸ ವ್ಯಕ್ತಪಡಿಸಿದ್ದು, ಸಂಸ್ಥೆಯ ಇನ್ನಷ್ಟು ಸಮಾಜಮುಖಿ ಹಾಗೂ ಧಾರ್ಮಿಕ ಕಾರ್ಯಗಳಿಗೆ ಇದು ಪ್ರೇರಣೆಯಾಗಲಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here