ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘ (ರಿ) ಮಂಗಳೂರು ಇವರ ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯ ಸಾಧನೆಯನ್ನು ಗುರುತಿಸಿ 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದ ಜಿಲ್ಲಾ ಸಂಘದ ಅಧ್ಯಕ್ಷರಾದ ಶ್ರೀ ಮಯೂರ್ ಉಳ್ಳಾಲ್ ಇವರಿಗೆ ಜಿಲ್ಲಾ ಸಂಘದ ಮಾಸಿಕ ಸಭೆಯಲ್ಲಿ ಗೌರವದ ಸನ್ಮಾನವನ್ನು ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕುಲಾಲ ಸಂಘ (ರಿ) ಮೂಡಬಿದ್ರೆಯ ಗೌರವಾಧ್ಯಕ್ಷರಾದ ಶ್ರೀ ಶಂಕರ್ ಕುಲಾಲ್ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕುಲಶೇಖರ ವೀರನಾರಾಯಣ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಸುಂದರ ಕುಲಾಲ್ ಹಾಗೂ ಶ್ರೀದೇವಿ ದೇವಸ್ಥಾನದ ಅಧ್ಯಕ್ಷರಾದ ಸದಾಶಿವ ಕುಲಾಲ್ ಹಾಗೂ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು

