ನವದೆಹಲಿ: ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಜೀವನಾಂಶ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಿಆರ್ಪಿಸಿ ಕಲಂ 125ರಡಿ ವಿಚ್ಛೇದಿತ ಪತ್ನಿಗೆ ಜೀವನಾಂಶ ಪಾವತಿಸುವ ನಿರ್ದೇಶನವನ್ನು ಪ್ರಶ್ನಿಸಿ ಮುಸ್ಲಿಂ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಈ ತೀರ್ಪು ಹೊರಬಿದ್ದಿದೆ. ನ್ಯಾ. ಬಿ.ವಿ. ನಾಗರತ್ನ ಮತ್ತು ನ್ಯಾ. ಆಗಸ್ಟಿನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ನ್ಯಾಯಪೀಠವು ಈ ಅರ್ಜಿಯನ್ನು ವಜಾಗೊಳಿಸಿದೆ.
ಜೀವನಾಂಶವನ್ನು ಕೋರು ಕಾನೂನು ಎಲ್ಲಾ ವಿವಾಹಿತ ಮಹಿಳೆಯರಿಗೆ ಅವರ ಧರ್ಮವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಪೀಠ ಸ್ಪಷ್ಟಪಡಿಸಿದೆ.
ಸೆಕ್ಷನ್ 125 ವಿವಾಹಿತ ಮಹಿಳೆಯರಿಗೆ ಮಾತ್ರವಲ್ಲ, ಎಲ್ಲಾ ಮಹಿಳೆಯರಿಗೆ ಅನ್ವಯವಾಗುತ್ತದೆ ಎಂದು ಪೀಠ ಸ್ಪಷ್ಟಪಡಿಸಿದೆ.