ಮಂಗಳೂರು : ನಾಡಿನಾದ್ಯಂತ ಸಂಭ್ರಮ ಸಡಗರದಿಂದ ಆಚರಿಸುವ ದೀಪಾವಳಿ ಜನತೆಯನ್ನು ಒಂದಾಗಿಸಿ ಬಾಂಧವ್ಯ ಬೆಸೆಯುವ ಹಬ್ಬವಾಗಿದೆ. ಹಬ್ಬಗಳ ಸಾಮೂಹಿಕ ಆಚರಣೆ ನಮ್ಮ ದೈನಂದಿನ ಬದುಕಿಗೆ ಹೊಸ ಚೈತನ್ಯ ನೀಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು.
ನಗರದ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಭಾನುವಾರ ಪತ್ರಕರ್ತರ ಕುಟುಂಬದವರಿಗೆ ಆಯೋಜಿಸಿದ ದೀಪಾವಳಿ ಸ್ನೇಹ ಮಿಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ‘ ಬೆಳಗುವ ದೀಪದಲ್ಲಿ ನಾಳಿನ ಭರವಸೆಯ ಬೆಳಕಿದೆ. ಸಮೃದ್ಧಿ ಹಾಗೂ ನಾಡಿನ ಸಮಸ್ತ ಜನರಿಗೆ ಒಳಿತು ಬಯಸುವ ಜ್ಞಾನದ ದೀಪ ಪ್ರತಿಯೊಬ್ಬರ ಮನದಲ್ಲೂ ಬೆಳಗುವಂತಾಗಬೇಕು’ ಎಂದು ಅವರು ಹೇಳಿದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಇದೇ ಸಂದರ್ಭ ಜಿಲ್ಲಾ ರಾಜ್ಯೋತ್ಸವದಲ್ಲಿ ದ.ಕ.ಜಿಲ್ಲಾ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತರಾದ ಪುಷ್ಪರಾಜ್.ಬಿ.ಎನ್. ಮತ್ತು ರಾಜೇಶ್ ರಾವ್ ಇವರುಗಳನ್ನು ಸನ್ಮಾನಿಸಲಾಯಿತು.
ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಜಿಲ್ಲಾ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಉಪಸ್ಥಿತರಿದ್ದರು. ಲಾರೆನ್ಸ್ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.
ದೀಪಾವಳಿ ಬಾಂಧವ್ಯ ಬೆಸೆಯುವ ಹಬ್ಬ -ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ
RELATED ARTICLES