ನವದೆಹಲಿ : ಮುಖ್ಯಮಂತ್ರಿ D. K. Shivakumar ಅವರು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ Amit Shah ಅವರನ್ನು ಭೇಟಿ ಮಾಡಿ ಕರ್ನಾಟಕದ ಪೊಲೀಸ್ ಇಲಾಖೆ ಹಾಗೂ ಭದ್ರತಾ ವ್ಯವಸ್ಥೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ 9 ಮಹತ್ವದ ಬೇಡಿಕೆಗಳನ್ನು ಸಲ್ಲಿಸಿದ್ದಾರೆ.
ದೆಹಲಿಯ ಕರ್ತವ್ಯಭವನದಲ್ಲಿ ನಡೆದ ಭೇಟಿಯ ವೇಳೆ ರಾಜ್ಯದ ಪೊಲೀಸ್ ವ್ಯವಸ್ಥೆ ಆಧುನೀಕರಣ, ಸೈಬರ್ ಅಪರಾಧ ನಿಯಂತ್ರಣ, ಜೈಲುಗಳ ಸುಧಾರಣೆ, ಸಿಸಿಟಿವಿ ವ್ಯವಸ್ಥೆಗಳ ಮೇಲ್ದರ್ಜೀಕರಣ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ.
ಡಿಕೆಶಿ ಸಲ್ಲಿಸಿದ 9 ಪ್ರಮುಖ ಬೇಡಿಕೆಗಳು
- ಕರ್ನಾಟಕ ರಾಜ್ಯ ಪೊಲೀಸ್‌ಗೆ ‘ಪ್ರೆಸಿಡೆಂಟ್ಸ್ ಕಲರ್’ ಪ್ರಶಸ್ತಿ ಮಂಜೂರು.
- ವಿಜಯನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಎರಡು ಹೊಸ ಇಂಡಿಯಾ ರಿಸರ್ವ್ ಬೆಟಾಲಿಯನ್‌ಗಳ ಸ್ಥಾಪನೆ.
- ನಾಲ್ಕು ಪ್ರಮುಖ ನಗರಗಳಲ್ಲಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್‌ಗಳ ನಿರ್ಮಾಣ.
- ಪೊಲೀಸ್ ಚಟುವಟಿಕೆಗಳನ್ನು ಸಿಎಸ್‌ಆರ್ ನಿಧಿ ವ್ಯಾಪ್ತಿಗೆ ಸೇರಿಸುವುದು.
- ಪೊಲೀಸ್ ತರಬೇತಿ ಸಂಸ್ಥೆಗಳ ಮೂಲಸೌಕರ್ಯ ಮೇಲ್ದರ್ಜೀಕರಣ.
- ಕಾರಾಗೃಹಗಳ ಆಧುನೀಕರಣಕ್ಕಾಗಿ 20 ಕೋಟಿ ರೂ. ಬಿಡುಗಡೆ.
- ಮೋಟಾರು ವಾಹನ ನಿಯಮ 52-A ಅನುಷ್ಠಾನದ ಗಡುವು ವಿಸ್ತರಣೆ.
- ಪೊಲೀಸ್ ಠಾಣೆಗಳಲ್ಲಿನ ಸಿಸಿಟಿವಿ ಕ್ಯಾಮೆರಾ ವ್ಯವಸ್ಥೆಗಳ ಸುಧಾರಣೆ.
- ಕರ್ನಾಟಕ ಸೈಬರ್ ಕ್ರೈಮ್ ಕಂಟ್ರೋಲ್ ಅಂಡ್ ಕೋಆರ್ಡಿನೇಷನ್ ಯುನಿಟ್ (K4C) ಸ್ಥಾಪನೆಗೆ ಅನುಮೋದನೆ.
ಡಿಕೆ ಶಿವಕುಮಾರ್ ಅವರು ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳು, ಕಾನೂನು ಸುವ್ಯವಸ್ಥೆ ಹಾಗೂ ಪೊಲೀಸ್ ಇಲಾಖೆಯ ಆಧುನೀಕರಣದ ಅಗತ್ಯವನ್ನು ಕೇಂದ್ರದ ಗಮನಕ್ಕೆ ತಂದಿದ್ದು, ಈ ಎಲ್ಲಾ ಪ್ರಸ್ತಾವನೆಗಳಿಗೆ ಶೀಘ್ರ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ.

