Saturday, December 14, 2024
Homeಅಂತಾರಾಷ್ಟ್ರೀಯಅಮೆರಿಕ ಅಧ್ಯಕ್ಷೀಯ ಚುನಾವಣೆ‌ | ಕಮಲಾ ಹ್ಯಾರಿಸ್‌ ಪ್ರಚಾರ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ...

ಅಮೆರಿಕ ಅಧ್ಯಕ್ಷೀಯ ಚುನಾವಣೆ‌ | ಕಮಲಾ ಹ್ಯಾರಿಸ್‌ ಪ್ರಚಾರ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ | ವಿಡಿಯೋ ವೈರಲ್

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯ ದಿನ ಸಮೀಪಿಸುತ್ತಿದ್ದು, ಘಟಾನುಘಟಿಗಳ ಜಿದ್ದಾಜಿದ್ದಿ ಫೈಟ್‌ ಮುಗಿಲು ಮುಟ್ಟಿದೆ. ಭಾರತ ಮೂಲದ ಕಮಲಾ ಹ್ಯಾರಿಸ್, ಡೋನಾಲ್ಡ್ ಟ್ರಂಪ್‌ ನಡುವಿನ ಚುನಾವಣಾ ಸಮರ ಇಡೀ ವಿಶ್ವದ ಗಮನ ಸೆಳೆದಿದೆ. ಈ ಚುನಾವಣೆಯ ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿ, ಭಾರತ ಮೂಲದ ಕಮಲಾ ಹ್ಯಾರಿಸ್‌ ಅವರ ಪರವಾದ ಚುನಾವಣಾ ಪ್ರಚಾರ ಸಭೆಯಲ್ಲಿ ಕರ್ನಾಟಕದ ಡಿಸಿಎಂ ಡಿ.ಕೆ ಶಿವಕುಮಾರ್ ಭಾಗಿಯಾಗಿ ಗಮನ ಸೆಳೆದಿದ್ದಾರೆ. ಈ ಕುರಿತ ವಿಡಿಯೋ ಒಂದು ಈಗ ವೈರಲ್‌ ಆಗಿದೆ.
ಕಮಲಾ ಹ್ಯಾರಿಸ್ ​ಚುನಾವಣೆ ಪ್ರಚಾರ ಸಭೆಯಲ್ಲಿ ಕುಟುಂಬ ಸಮೇತ ಅಮೆರಿಕ ಪ್ರವಾಸದಲ್ಲಿರುವ ಡಿ.ಕೆ. ಶಿವಕುಮಾರ್​ ಭಾಗಿಯಾಗಿದ್ದಾರೆ. ಕಮಲಾ ಹ್ಯಾರಿಸ್ ಅವರು ನಾರ್ತ್​ ಕೆರೊಲಿನಾದ ಶಾರ್ಲೆಟ್​ನಲ್ಲಿ ಪ್ರಚಾರ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಕಮಲಾ ಹ್ಯಾರಿಸ್​ 25 ನಿಮಿಷಗಳ ಕಾಲ ಭಾಷಣ ಮಾಡಿದರು. ಈ ವೇಳೆ ಗರ್ಭಪಾತದ ಬಗ್ಗೆ ಮಹಿಳೆಯರ ಆಯ್ಕೆಯ ಹಕ್ಕಿಗಾಗಿ ತನ್ನ ಬೆಂಬಲವನ್ನು ಒತ್ತಿ ಹೇಳಿದ್ದಾರೆ. ಮಹಿಳೆಯರ ಮೂಲಭೂತ ಸ್ವಾತಂತ್ರ್ಯ, ಕೈಗೆಟುಕುವ ಆರೋಗ್ಯ ರಕ್ಷಣೆ ಕುರಿತು ತನ್ನ ಆಲೋಚನೆಗಳನ್ನು ಹಂಚಿಕೊಂಡಿದ್ದಾರೆ. ಸಣ್ಣ ವ್ಯಾಪಾರಿಗಳು ಅಮೆರಿಕದ ಆರ್ಥಿಕತೆಯ ಬೆನ್ನೆಲುಬು ಎಂದು ಹ್ಯಾರಿಸ್ ಹೇಳಿದರು.
ಡಿ.ಕೆ. ಶಿವಕುಮಾರ್ ಅವರು ಕಮಲಾ ಹ್ಯಾರಿಸ್​ ಪರ ಪ್ರಚಾರ ಸಭೆಯಲ್ಲಿ ಭಾಗಿಯಾಗಿದ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಪೋಸ್ಟ್ ಮಾಡಿರುವ ಡಿಕೆಶಿ, ಅಮೆರಿಕಾ ಚುನಾವಣಾ ಸಭೆಯಲ್ಲಿ ಭಾಗಿಯಾಗಿದ್ದು, ಅದ್ಭುತ ಕ್ಷಣವಾಗಿತ್ತು. ನನ್ನ ಕುಟುಂಬದ ಪ್ರವಾಸದಲ್ಲಿ ಹೊಸ ಅನುಭವ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಸಾಕಷ್ಟು ಕಲಿತಿದ್ದೇನೆ. ಇಲ್ಲಿನ ಜನರ ಶಕ್ತಿ ಮತ್ತು ಉತ್ಸಾಹ ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ ಎಂದು ತಿಳಿಸಿದ್ದಾರೆ.

ವಿಡಿಯೋ ವೀಕ್ಷಿಸಲು ಲಿಂಕ್‌ ಕ್ಲಿಕ್‌ ಮಾಡಿ…

https://www.instagram.com/reel/C_1Do8_y5VB/?utm_source=ig_embed&ig_rid=4e4221f8-e23d-4509-b867-88884c2e5d16

RELATED ARTICLES
- Advertisment -
Google search engine

Most Popular