“ಅಧಿಕಾರಿಗಳ ಮೇಲೆ ಹಲ್ಲೆ ಬೇಡ, ಹೊಡೆಯಬೇಕಾದರೆ ನನಗೆ ಹೊಡೆಯಿರಿ” – ಡಿ.ಕೆ. ಶಿವಕುಮಾರ್

0
17

ಬೆಂಗಳೂರು : ಬಿಡದಿ ಟೌನ್‌ಶಿಪ್‌ ಸರ್ವೆ ಕಾರ್ಯಕ್ಕೆ ತೆರಳಿದ್ದ ಅಧಿಕಾರಿಗಳ ಮೇಲೆ ಹಲ್ಲೆ ನಡೆದಿರುವ ಘಟನೆ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಅಧಿಕಾರಿಗಳ ಮೇಲೆ ಹಲ್ಲೆ ನಡೆಸಬಾರದು ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ವಿಧಾನಸೌಧದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಿಡದಿಯಲ್ಲಿ ನಡೆದ ಘಟನೆ ಮನಸ್ಸಿಗೆ ತುಂಬಾ ನೋವು ತಂದಿದೆ. ತಾಯಂದಿರು ಅಧಿಕಾರಿಗಳಿಗೆ ಪೊರಕೆಯಿಂದ ಹೊಡೆಯುವ ಅವಶ್ಯಕತೆ ಇಲ್ಲ. ಬೇಕಾದರೆ ನನಗೆ ಹೊಡೆಯಲಿ, ನಾನು ಹೊಡಿಸಿಕೊಳ್ಳಲು ಸಿದ್ಧನಿದ್ದೇನೆ” ಎಂದು ಭಾವುಕರಾಗಿ ಹೇಳಿದರು.

ಮುಂದುವರಿದು ಮಾತನಾಡಿದ ಅವರು, “ನಮ್ಮ ಸರ್ಕಾರ ಯಾವುದೇ ಜಮೀನನ್ನು ಬಲವಂತವಾಗಿ ತೆಗೆದುಕೊಳ್ಳುವ ಉದ್ದೇಶ ಹೊಂದಿಲ್ಲ. ಸಾರ್ವಜನಿಕರ ಸಹಕಾರದೊಂದಿಗೆ ಎಲ್ಲ ಪ್ರಕ್ರಿಯೆಗಳನ್ನೂ ಕಾನೂನುಬದ್ಧವಾಗಿ ನಡೆಸಲಾಗುತ್ತದೆ” ಎಂದು ಸ್ಪಷ್ಟಪಡಿಸಿದರು.

ಬಿಡದಿ ಟೌನ್‌ಶಿಪ್‌ಗೆ ಸಂಬಂಧಿಸಿದ ಸರ್ವೆ ಕಾರ್ಯದ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ ನಡೆದಿರುವ ಘಟನೆ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಅವರು ತಿಳಿಸಿದ್ದಾರೆ.