ವೀರ ವೃಷಸೇನ ಯಕ್ಷಗಾನ ದಾಖಲೀಕರಣ

0
22

ಉಡುಪಿ : ಯಕ್ಷಗಾನ ಕಾಲಕಾಲಕ್ಕೆ ಬದಲಾವಣೆ ಕಾಣುತ್ತಿದೆ. ಹಿಂದಿನ ಕಲಾವಿದರ ಪರಂಪರೆಯ ವೇಷಗಳು ಇಂದು ಕಣ್ಮರೆಯಾಗುತ್ತಿವೆ. ಇಂತಹ ಸಂದರ್ಭದಲ್ಲಿ ಕಲೆಯ ದಾಖಲೀಕರಣ ಹೆಚ್ಚಿನ ಮಹತ್ವವನ್ನು ಪಡೆಯುತ್ತದೆ. ಇದರಿಂದ ಮುಂದಿನ ಕಲಾವಿದರಿಗೆ ಸಹಾಯವಾಗಲಿದೆ. ಈ ನಿಟ್ಟಿನಲ್ಲಿ ರಂಗದಲ್ಲಿ ಅಳವಡಿಸಿಕೊಂಡು ಬಂದ ಯಕ್ಷಗಾನ ಕಲೆಯ ಮೂಲಸ್ವರೂಪವನ್ನು ಯುವ ಜನಾಂಗಕ್ಕೆ ತಲುಪಿಸುವ ಕೆಲಸ ಮಾಡಬೇಕಿದೆ ಎಂದು ಅಕಾಡೆಮಿ ಆಫ್​ ಜನರಲ್​ ಎಜುಕೇಶನ್​ ಕಾರ್ಯದರ್ಶಿ ಡಾ. ನಾರಾಯಣ ಸಭಾಹಿತ್​ ಹೇಳಿದರು.

ಎಂ.ಜಿ.ಎಂ ಕಾಲೇಜು ನೂತನ ರವೀಂದ್ರ ಮಂಟಪದಲ್ಲಿ ಇಂದ್ರಾಳಿ ಯಕ್ಷಗಾನ ಕೇಂದ್ರ, ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ ಹಾಗೂ ಕನ್ನಡ ಮತ್ತು ಸಂಸತಿ ಇಲಾಖೆ ಆಶ್ರಯದಲ್ಲಿ ವೀರ ವೃಷಸೇನ ಯಕ್ಷಗಾನ ದಾಖಲೀಕರಣ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಹಿಂದಿನ ಕಲಾವಿದರು ಸನ್ನಿವೇಶವನ್ನು ರಂಗದಮೇಲೆ ಕಟ್ಟುತ್ತಿದ್ದ ರೀತಿ ಅನನ್ಯವಾದುದು. ಅದನ್ನು ಉಳಿಸಿಕೊಂಡು ಬೆಳೆಸಿಕೊಂಡು ಬರಬೇಕಾಗಿರುವುದು ನಮ್ಮೆಲ್ಲರ ಆದ್ಯಕರ್ತವ್ಯ. ಆ ನಿಟ್ಟಿನಲ್ಲಿ ಯಕ್ಷಗಾನ ಕೇಂದ್ರದ ಹೊಸ ಪ್ರಯತ್ನ ಶ್ಲಾಘನೀಯ ಎಂದರು.

ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಮಾತನಾಡಿದರು. ಯಕ್ಷಗಾನ ಕಲಾವಿದ ಡಾ. ಜಗದೀಶ್​ ಶೆಟ್ಟಿ ಸಿದ್ಧಾಪುರ, ಯಕ್ಷಗಾನ ಕೇಂದ್ರದ ಸಲಹಾ ಸಮಿತಿ ಸದಸ್ಯ ವಿಶ್ವನಾಥ ಶೆಣೈ, ಮೀನಲಕ್ಷಿಣಿ ಅಡ್ಯಂತಾಯ, ವಿ.ಜಿ ಶೆಟ್ಟಿ, ಭುವನ ಪ್ರಸಾದ್​ ಹೆಗ್ಡೆ ಉಪಸ್ಥಿತರಿದ್ದರು. ಯಕ್ಷಗಾನ ಕೇಂದ್ರದ ಸಲಹಾ ಸಮಿತಿ ಅಧ್ಯಕ್ಷ ಪಳ್ಳಿ ಕಿಶನ್​ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ. ಜಗದೀಶ್​ ಶೆಟ್ಟಿ ಸ್ವಾಗತಿಸಿದರು. ಯಕ್ಷಗಾನ ಕೇಂದ್ರದ ಸಲಹಾ ಸಮಿತಿ ಸದಸ್ಯ ಪ್ರೊ. ಎಸ್​.ವಿ. ಉದಯಕುಮಾರ್​ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಮೇಶ್​ ಸುವರ್ಣ ಪ್ರಾರ್ಥಿಸಿದರು. ಎಂ.ಜಿ.ಎಂ. ಕಾಲೇಜಿನ ಕನ್ನಡ ಪ್ರಾಧ್ಯಾಪಕ ರಾಘವೇಂದ್ರ ತುಂಗ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

LEAVE A REPLY

Please enter your comment!
Please enter your name here