‘ಗಂಗೆಯಲ್ಲಿ ಮಿಂದರೆ ಬಡತನ ನೀಗುತ್ತದೆಯೇ’ ಎಂದು ಪ್ರಶ್ನಿಸಿ ಕೋಟ್ಯಾoತರ ಆಸ್ತಿಕ ಹಿಂದೂಗಳ ಭಾವನೆಗಳಿಗೆ ಘಾಸಿಯಂನ್ನುಟುಮಾಡಿದ್ದ ಎಐಸಿಸಿ ಅಧ್ಯಕ್ಷ ಖರ್ಗೆ ಉವಾಚದ ನಡುವೆಯೇ ಸದನದ ವಸತಿ ಸಮಿತಿ ಸದಸ್ಯರಿಗೆ, ಅದರಲ್ಲೂ ಗರಿಷ್ಠ ಸಂಖ್ಯೆಯ ಕಾಂಗ್ರೆಸ್ ಶಾಸಕರಿಗೆ ಕುಂಭಮೇಳ (ಉತ್ತರ ಭಾರತ) ಅಧ್ಯಯನ ಪ್ರವಾಸಕ್ಕೆ ರೂ.50 ಲಕ್ಷಕ್ಕೂ ಮಿಕ್ಕಿದ ಮೊತ್ತವನ್ನು ವ್ಯಯಿಸಲು ಮುಂದಾಗಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರಕ್ಕೆ ಕಳೆದ ಒಂದು ವಾರದಿಂದ ವಿವಿಧ ತುರ್ತು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯoತ ಪ್ರತೀ ತಾಲೂಕು ಕೇಂದ್ರಗಳಲ್ಲಿ ನಡೆಯುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ ಕಾಣದಾಯಿತೇ ಎಂದು ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಹಾಗೂ ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಪ್ರಶ್ನಿಸಿದ್ದಾರೆ.
ಗ್ರಾಮ ಆಡಳಿತಾಧಿಕಾರಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರಿದ್ದು ಕಛೇರಿಯಲ್ಲಿ ಶೌಚಾಲಯದಂತಹ ಕನಿಷ್ಠ ಮುಲಭೂತ ವ್ಯವಸ್ಥೆಗಳನ್ನೂ ಒದಗಿಸಲು ಅಸಮರ್ಥವಾಗಿರುವ ರಾಜ್ಯ ಸರಕಾರ ಕಾಂಗ್ರೆಸ್ ಶಾಸಕರ ಓಲೈಕೆಗಾಗಿ 42 ಮಂದಿ ಶಾಸಕರನ್ನು ನಿಗಮ ಮಂಡಳಿಗಳ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನವನ್ನು ನೀಡಿ ಅವರು ಸರಕಾರಕ್ಕೆ ನಿಷ್ಠರಾಗಿರುವಂತೆ ನೋಡಿಕೊಂಡಿರುವುದು ಹಾಗೂ ಸರಕಾರದ ಈ ನಡೆಯ ವಿರುದ್ಧ ಸಾರ್ವಜನಿಕ ಹಿತಾಸಕ್ತಿಯ ದೂರು ದಾಖಲಾಗಿರುವುದು ಮಾತ್ರವಲ್ಲದೆ ವಿವಿಧ ಸಮಾವೇಶಗಳಿಗೆ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.
ಹೆಚ್ಚಿನ ಗ್ರಾಮ ಆಡಳಿತ ಅಧಿಕಾರಿಗಳ ಕಛೇರಿಗಳು ಸ್ವಂತ ಕಟ್ಟಡವೂ ಇಲ್ಲದೆ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಹುಟ್ಟಿನಿಂದ ಸಾವಿನವರೆಗೆ, ಸರಕಾರದ ಎಲ್ಲಾ ಯೋಜನೆಗಳನ್ನು ಜನತೆಗೆ ತಲುಪಿಸುವ ಮಹತ್ತರ ಜವಾ