ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಧ್ವನಿವರ್ಧಕ ಕೊಡುಗೆ

ಕಣಿಯೂರು : ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಅಕ್ಟೋಬರ್ 15 ರಂದು ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಧ್ವನಿವರ್ಧಕದ ವ್ಯವಸ್ಥೆಯನ್ನು ಕೊಡುಗೆಯಾಗಿ ನೀಡಲಾಯಿತು .

ಈ ಸಂದರ್ಭದಲ್ಲಿ ಪದ್ಮುಂಜ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರು ಉಮೇಶ್ ಗೌಡ ಖಂಡಿಗ, ಕಾರ್ಯದರ್ಶಿ ಸತೀಶ್, ವಿಸ್ತರಣಾಧಿಕಾರಿ ರಾಜೇಶ್ ಕಾಮತ್, ನಿರ್ದೇಶಕರಾದ ರಮಾನಂದ ಪೂಜಾರಿ ,ಸುನಿಲ್, ಹರೀಶ್ ಗೌಡ, ಶಾರದಾ ಮುಚ್ಚೂರು,ಸದಾಶಿವ ಶೆಟ್ಟಿ, ಪ್ರತಿಮಾ, ಮೊಗ್ರು ಡೈರಿ ಕಾರ್ಯದರ್ಶಿ ಶಶಿಕಲಾ, ಪಿಲಿಗೂಡು ಡೈರಿ ಕಾರ್ಯದರ್ಶಿ ಭಾರತಿ, ಡಾ.ನಿತಿನ್ ಹಾಗೂ ಪಾಲನ ಕೇಂದ್ರದ ವಿದ್ಯಾರ್ಥಿಗಳು,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

