ವಯಸ್ಸಿನ ಚಂಚಲತೆಗೆ ಒಳಗಾಗಿ ಬದುಕು ಹಾಳುಮಾಡಿಕೊಳ್ಳದಿರಿ – ನ್ಯಾ| ಎಮ್.ಪುರುಷೋತ್ತಮ್

0
5

ಕಾಪು : 18 ರಿಂದ 20 ರ ವಯಸ್ಸು ತಂತಿಯ ಮೇಲಿನ ನಡಿಗೆ ಇದ್ದಂತೆ. ಈ ವಯಸ್ಸಲ್ಲಿ ನಮಗೇನು ಅರಿವಿರುವುದಿಲ್ಲ. ಹೀಗಾಗಿ ದುಶ್ಚಟಗಳಿಗೆ ಬಲಿಯಾಗದೇ, ಉತ್ತಮ ಮಾರ್ಗದಲ್ಲಿ ನಡೆಯಿರಿ. ಕಾನೂನಿನ ಅರಿವು ಬೆಳೆಸಿಕೊಳ್ಳುವುದು ಅತ್ಯಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಮ್.ಪುರುಷೋತ್ತಮ್ ಸಲಹೆ ನೀಡಿದರು.

ಅವರು ಮಂಗಳವಾರ, ದಂಡತೀರ್ಥ ಪಿಯು ಕಾಲೇಜಿನಲ್ಲಿ ಪೋಕ್ಸೊ ಕಾಯ್ದೆಯ ಕುರಿತು ವಿಶೇಷ ಉಪನ್ಯಾಸ ನೀಡಿದರು.

18 ವರ್ಷದ ಒಳಗಿನ ಗಂಡು ಅಥವಾ ಹೆಣ್ಣುಮಗುವಿಗೆ ಯಾವುದೇ ರೀತಿಯಲ್ಲಿ ಅಸಭ್ಯವಾಗಿ ವರ್ತಿಸಿದರೂ ಅದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲು ಅರ್ಹವಾಗಿರುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಪೋಕ್ಸೊ ಕಾಯ್ದೆಯ ಕುರಿತು ಅರಿತುಕೊಳ್ಳಬೇಕು

ಇಬ್ಬರು ಪ್ರೀತಿಸಿದ ನಂತರ ವಿದ್ಯಾರ್ಥಿನಿಯ ಪೋಷಕರು ಆಕೆಗಿನ್ನು 18 ತುಂಬಿಲ್ಲ ಎಂದು ದೂರು ಕೊಟ್ಟರೇ, ಪೋಕ್ಸೊ ಪ್ರಕರಣದಲ್ಲಿ ಆತ ಬಂಧನಕ್ಕೊಳಗಾಗುತ್ತಾನೆ. ಹೀಗಾಗಿ ವಿದ್ಯಾರ್ಥಿಗಳು ಹದಿಹರೆಯದ ಆಕರ್ಷಣೆಗಳಿಗೆ ಒಳಗಾಗದೇ, ಉತ್ತಮ ವಿದ್ಯಾರ್ಥಿಗಳಿಗಾಗಿ, ದೇಶ ಪ್ರೇಮವನ್ನು ಬೆಳೆಸಿಕೊಳ್ಳಿ ಎಂದು ಸಲಹೆ ನೀಡಿದರು.

ಆಶ್ಲೀಲ ಪೋಟೋ ನೋಡುವುದು ಅಪರಾಧವಾಗಿದೆ. ಪ್ರಕರಣದ ಬಗ್ಗೆ ತಿಳಿದು, ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡದೇ ಇರುವುದು, ಸುಳ್ಳು ಪ್ರಕರಣ ದಾಖಲಿಸುವುದು ಈ ಎಲ್ಲಾ ಕೃತ್ಯಗಳನ್ನು ತಪ್ಪು ಎಂದು ಕಾಯ್ದೆ ತಿಳಿಸಿದ್ದು, ಶಿಕ್ಷೆಯನ್ನು ವಿಧಿಸಲಾಗಿದೆ. ಆದ್ದರಿಂದ ವಿದ್ಯಾರ್ಥಿಗಳು, ಶಿಕ್ಷಕರು ಈ ಕಾಯ್ದೆಯ ಬಗ್ಗೆ ತಿಳಿದುಕೊಂಡು, ಇತರರಿಗೂ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸಿ ಎಂದರು.

ನಮ್ಮ ದೈನಂದಿನ ಚಟುವಟಿಕೆಗಳಿಗೆ ಅಗತ್ಯವಾಗಿ ಕಾನೂನುಗಳನ್ನು ತಿಳಿದುಕೊಂಡಿರಬೇಕು. ನಮಗೆ ಕಾನೂನುಗಳನ್ನು ತಿಳಿದುಕೊಂಡಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಹೀಗಾಗಿ ಸ್ವಲ್ಪವಾದರೂ ಕಾನೂನಿನ ಅರಿವು ಮೂಡಿಸಿಕೊಳ್ಳಿ ಎಂದರು.

ಕಾಲೇಜಿನ ಸಂಚಾಲಕ ಡಾ.ಕೆ ಪ್ರಶಾಂತ್ ಶೆಟ್ಟಿ,ಸಮಾರಂಭದ ಅಧ್ಯಕ್ಷ ಸ್ಥಾನವನ್ನು ವಹಿಸಿ,ಹದಿಹರೆಯದಲ್ಲಿ ಮಕ್ಕಳಿಗೆ ಇಂತಹ ಕಾನೂನು ರೀತಿಯ ಮಾರ್ಗದರ್ಶನ ಅಗತ್ಯವಾಗಿ ದೊರಕಿದಾಗ,ಮಕ್ಕಳು ಅಪರಾಧ ಮುಕ್ತ ಬದುಕಿನಲ್ಲಿ ಜೀವನ ನಡೆಸುತ್ತಾರೆ ಎಂದು ಹೇಳಿದರು.

ಪತ್ರಕರ್ತ ರಕ್ಷಿತ್ ಬೆಳಪು, ಪ್ರಾಥಮಿಕ ವಿಭಾಗದ ಮುಖ್ಯಸ್ಥ ಗೇಬ್ರಿಯಲ್ ಮಸ್ಕರೇನ್ಹಸ್ ಉಪಸ್ಥಿತರಿದ್ದರು. ಪ್ರಾಂಶುಪಾಲ ನೀಲಾನಂದ ನಾಯ್ಕ್ ಸ್ವಾಗತಿಸಿ, ಶಿಕ್ಷಣ ಸಂಯೋಜಕ ಶಿವಣ್ಣ ಬಾಯರ್ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here