ಡಾ. ಅಘೋರಿ ಚಿದಂಬರ ಯೋಗಿಯವರನ್ನು “ಕರುನಾಡ ಕನ್ನಡ ಕಣ್ಮಣಿ” ರಾಜ್ಯ ಪ್ರಶಸ್ತಿಗೆ ಆಯ್ಕೆ

0
9

ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಆಶ್ರಯದಲ್ಲಿ ದಾವಣಗೆರೆಯ ಓಂ ಚಂಡಿಕಾ ಸೇವಾ ಟ್ರಸ್ಟ್ನ ಸಂಸ್ಥಾಪಕರಾದ ಡಾ. ಅಘೋರಿ ಚಿದಂಬರ ಯೋಗಿಯವರನ್ನು “ಕರುನಾಡ ಕನ್ನಡ ಕಣ್ಮಣಿ” ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷರಾದ ವಾಸುದೇವ ಲಕ್ಷ್ಮ ಣ್ ರಾಯ್ಕರ್ ತಿಳಿಸಿದ್ದಾರೆ.

ಸಾರ್ವಜನಿಕವಾಗಿ ಮಾನವರ ಎಲ್ಲಾ ಜೀವನದ ಸಮಸ್ಯೆಗಳನ್ನು ಪರಿಹಾರ ಮಾಡುತ್ತಿರುವ ಆಧ್ಯಾತ್ಮಿಕ ಸೇವೆ ಸಲ್ಲಿಸುತ್ತಿರುವ ಸಾಧನೆಗಳನ್ನು ಗುರುತಿಸಿ ಈ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಪ್ರಕಟಿಸಿದ್ದಾರೆ. ಓಂ ಚಂಡಿಕಾ ಸೇವಾ ಟ್ರಸ್ಟ್ನ ಸರ್ವ ಸದಸ್ಯರು, ಪದಾಧಿಕಾರಿಗಳು, ಕಲಾಕುಂಚದ ಸರ್ವ ಸದಸ್ಯರು, ಪದಾಧಿಕಾರಿಗಳು ಇವರಿಗೆ ಅಭಿಮಾನದಿಂದ ಅಭಿನಂದಿಸಿ ಕಲಾಕುಂಚದ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here