Sunday, July 14, 2024
Homeಉಡುಪಿಡಾ. ಶೇಖರ ಅಜೆಕಾರು ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಡಾ. ಶೇಖರ ಅಜೆಕಾರು ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ


ಕಾರ್ಕಳ: ಸಾಹಿತ್ಯ ,ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ ಅಗಲಿದ ಪತ್ರಕರ್ತ ಡಾ. ಶೇಖರ ಅಜೆಕಾರು ಅವರ ಹೆಸರಿನಲ್ಲಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ಡಾ. ಶೇಖರ ಅಜೆಕಾರು ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯಮಟ್ಟದಲ್ಲಿ ಸಾಹಿತ್ಯ ಹಾಗೂ ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮಹಮ್ಮದ್ ಷರೀಫ್ ಹೇಳಿದರು.
ಅವರು ಶನಿವಾರ ಕಾರ್ಕಳ ಪ್ರವಾಸಿ‌ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ಸಾಹಿತ್ಯ ಹಾಗೂ ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಕನಿಷ್ಠ ಹತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ ಪತ್ರಕರ್ತರು ಯಾ ಸಾಹಿತಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪ್ರಶಸ್ತಿಯು ಹತ್ತು ಸಾವಿರ ಪ್ರಶಸ್ತಿ ನಗದು ಹಾಗೂ ರಜತ ಫಲಕ ಒಳಗೊಂಡಿರುತ್ತದೆ‌ ಎಂದು ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಕಾರ್ಯದರ್ಶಿ ಹರೀಶ್ ಆಚಾರ್ಯ, ಕೋಶಾಧಿಕಾರಿ ಮಹಮ್ಮದ್ ಖಲೀಲ್, ಉಪಸ್ಥಿತರಿದ್ದರು.

ಅರ್ಜಿಯನ್ನು ಜೂನ್ 21 ತಾರೀಕಿನೊಳಗೆ ಸ್ವ ವಿವರ ಹಾಗೂ ಭಾವಚಿತ್ರದೊಂದಿಗೆ ಅರ್ಜಿಯನ್ನು ಈ ಕೆಳಗೆ ನಮೂದಿಸಿದ ವಿಳಾಸಕ್ಕೆ ಕಳುಹಿಸಿ ಕೊಡಬಹುದಾಗಿದೆ. ತದನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಮೊಹಮ್ಮದ್ ಶರೀಫ್ ಅಧ್ಯಕ್ಷರು, ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬಂಗ್ಲೆಗುಡ್ಡೆ ಪೋಸ್ಟ್ ಕುಕ್ಕುoದೂರು ,ಕಾರ್ಕಳ ತಾಲೂಕು 576117

ಹೆಚ್ಚಿನ ಮಾಹಿತಿಗಾಗಿ ‌ ಸಂಪರ್ಕಿಸಿ: 9845846213, 9945857561

RELATED ARTICLES
- Advertisment -
Google search engine

Most Popular