ಡಾ.ಚೂಂತಾರು ರೆಡ್‌ಕ್ರಾಸ್ ರಾಜ್ಯ ಘಟಕಕ್ಕೆ ಆಯ್ಕೆ

0
57

ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ 2025-2028ರ ಮೂರು ವರ್ಷದ ಅವಧಿಗೆ ರಾಜ್ಯ ಘಟಕದ ಕಾರ್ಯಕಾರಿ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಡಾ.ಮುರಲೀ ಮೋಹನ್ ಚೂಂತಾರು ಅವರು ಆಯ್ಕೆಯಾಗಿದ್ದಾರೆ. ರಾಜ್ಯಪಾಲರ ಸಚಿವಾಲಯ ಅವರ ನೇಮಕಾತಿ ಆದೇಶ ಹೊರಡಿಸಿದೆ.

ಡಾ.ಮುರಲೀ ಮೋಹನ್ ಚೂಂತಾರು ಅವರು ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಶಾಖೆಯ ಚೇರ್‌ಮನ್ ಮತ್ತು ಲೇಡಿಗೋಶನ್ ಆಸ್ಪತ್ರೆಯಲ್ಲಿರುವ ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್‌ನ ಚೇರ್‌ಮೆನ್ ಆಗಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಮಾಂಡೆಂಟ್ ಆಗಿ ಹಾಗೂ ಪೌರ ರಕ್ಷಣಾ ವಿಭಾಗದ ಮುಖ್ಯಪಾಲಕರಾಗಿ ಎರಡು ಅವಧಿಗೆ ಸೇವೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here