ಡಾ ಚೂಂತಾರು ಇವರಿಗೆ 2026ರ ಶ್ರೇಷ್ಟ ವೈದ್ಯ ಸಾಹಿತಿ ಪ್ರಶಸ್ತಿ

0
4

ಪ್ರಥಮ ಕನ್ನಡ ಸಮಗ್ರ ವೈದ್ಯಕೀಯ ಸಾಹಿತ್ಯ ಸಮ್ಮೇಳನ – 2026,
ನವೆಂಬರ್ 20 ಮತ್ತು 21, 2026 ರಂದು
ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ, ಬೆಂಗಳೂರು, ಇಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ,ಕರ್ನಾಟಕ ಸರ್ಕಾರ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಲಿದೆ.ಇದೇ ಸಂದರ್ಬದಲ್ಲಿ ಕನ್ನಡ ವೈದ್ಯ ಸಾಹಿತ್ಯದಲ್ಲಿ ಶ್ರೇಷ್ಟ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಗುತ್ತಿದ್ದು, ದಂತ ವೈದ್ಯಕೀಯ ವಿಭಾಗದಿಂದ ಡಾ ಮುರಲೀ ಮೋಹನ್ ಚೂಂತಾರು ಅವರು ಆಯ್ಕೆಯಾಗಿದ್ದಾರೆ. ದಿನಾಂಕ ೨೧/೧೧/೨೦೨೬ ರಂದು ಬೆಂಗಳೂರು ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಇಲ್ಲಿ ನಡೆಯುವ ಸಮಗ್ರ ವೈದ್ಯಕೀಯ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಎಲ್ಲಾ ಸಾಹಿತಿಗಳನ್ನು ಸನ್ಮಾನಿಸಲಾಗುತ್ತದೆ.ವೈದ್ಯಕೀಯ ವಿಜ್ಞಾನದ ಪ್ರಪ್ರಥಮ ಸಮಗ್ರ ವೈದ್ಯ ಸಾಹಿತ್ಯ ಸಮ್ಮೇಳನ ಇದಾಗಿದ್ದು ರಾಜ್ಯದ ಎಲ್ಲಾ ವೈದ್ಯ ಪ್ರಕಾರದ ವೈದ್ಯ ಸಾಹಿತಿಗಳು ಮತ್ತು ವೈದ್ಯ ವಿದ್ಯಾರ್ಥಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.