ಮೈಸೂರು ಕಂಬಳದ ಯಶಸ್ಸಿಗೆ ಸಿಎಂ ಜೊತೆ ಡಾ. ದೇವಿಪ್ರಸಾದ್ ಶೆಟ್ಟಿ ಚರ್ಚೆ

0
25

ಮಂಗಳೂರು : ಮೈಸೂರು ಕಂಬಳವನ್ನು ಯಶಸ್ವಿಯಾಗಿ ಆಯೋಜಿಸುವ ಕುರಿತು ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಅವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಮೈಸೂರು ಕಂಬಳವನ್ನು ಯಶಸ್ವಿಯಾಗಿ ನಡೆಸುವಂತೆ ಮುಖ್ಯಮಂತ್ರಿಗಳು ಸಲಹೆ ಹಾಗೂ ಮಾರ್ಗದರ್ಶನ ನೀಡಿದರು.

ಕೊಟ್ಟ ಮಾತಿನಂತೆ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಂಬಳಕ್ಕೆ ₹1 ಕೋಟಿ ಅನುದಾನ ನೀಡಲು ನಿರ್ಧರಿಸಲಾಗಿದ್ದು, ಮುಂದಿನ ವರ್ಷ ₹5 ಕೋಟಿ ಅನುದಾನ ನೀಡುವ ಭರವಸೆಯನ್ನೂ ಮುಖ್ಯಮಂತ್ರಿಗಳು ನೀಡಿದ್ದಾರೆ.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹಾಗೂ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.