ಉಡುಪಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಮೊದಲ ಪಟ್ಟಿಯಲ್ಲಿ ಉಡುಪಿಯ ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಜಿ.ಎಸ್. ಚಂದ್ರಶೇಖರ್ ಅವರ ಹೆಸರನ್ನು ಘೋಷಿಸಿ, ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ಕಾರಣ ನೀಡಿ ಕೈಬಿಟ್ಟಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ನಮ್ಮ ತುಳುನಾಡ ಪರಿಷತ್ತು ಅಸಮಾಧಾನ ವ್ಯಕ್ತ ಪಡಿಸಿದ್ದು ಸರಿಪಡಿಸದಿದ್ದಲ್ಲಿ ತುಳುನಾಡಿಗೆ ಮಾಡಿದ ಅನ್ಯಾಯ ವಿರುದ್ದ ಮುಂದಿನ ದಿನಗಳಲ್ಲಿ ಹೋರಾಟ ನಡೆಸುದಾಗಿ ನಮ್ಮ ತುಳುನಾಡ ಪರಿಷತ್ ಸಂಸ್ಥಾಪಕ ಅಧ್ಯಕ್ಷರಾದ ರೋಹಿತ್ ಕರಂಬಳ್ಳಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

